ಮಡಿಕೇರಿ, ಜ.24: ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಕಾಮಗಾರಿ ಪ್ರಗತಿ ಸಂಬಂಧ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ಕರ್ನಲ್ ಕಂಡ್ರತಂಡ ಸುಬ್ಬಯ್ಯ ಇದ್ದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಹಲವು ವರ್ಷಗಳಿಂದ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣ ಸಂಬಂಧ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಬೇಕಿದೆ ಎಂದು ಹೇಳಿದರು.

ಸ್ಮಾರಕ ಭವನ ನಿರ್ಮಾಣಕ್ಕೆ ಬಾಕಿ ಇರುವ ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಮೇಜರ್ ನಂಜಪ್ಪ ಅವರು ಮಾತನಾಡಿ ಜನರಲ್ ತಿಮ್ಮಯ್ಯ ಅವರು ಹುಟ್ಟಿದ ದಿನದಂದು ಸ್ಮಾರಕ ಭವನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ದರ್ಶನ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ಅವರು ಹಲವು ಮಾಹಿತಿ ನೀಡಿದರು. ಮಂಜುನಾಥ್, ಸಚಿನ್, ರಾಘವೇಂದ್ರ ಇತರರು ಇದ್ದರು.