ಸೋಮವಾರಪೇಟೆ,ಜ.24: ಇಲ್ಲಿಗೆ ಸಮೀಪದ ಗರ್ವಾಲೆಯ ಭಾರತೀಯ ವಿದ್ಯಾಭವನದ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ ತಾ. 25ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಪಿ.ಕೆ.ಸೋಮಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರಾದ ಡಾ.ಹೆಚ್.ಎಸ್.ಶಿವಪ್ರಸಾದ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ತೇಲಪಂಡ ಕವನ್ ಕಾರ್ಯಪ್ಪ, ಗರ್ವಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಂ.ಸುಭಾಷ್, ಗ್ರಾಮದ ಹಿರಿಯರಾದ ಗೀಜಿಗಂಡ ಕಾಮವ್ವ, ಗೀಜಿಗಂಡ ಮಂದಣ್ಣ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ವಾರ್ಷಿಕೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ, ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.