ಮಡಿಕೇರಿ, ಜ. 24: ಸೋಮವಾರಪೇಟೆ ತಾಲೂಕಿನ ಚೌಡ್ಲು, ಬೇಲೂರು, ಶಾಂತಳ್ಳಿ ಮತ್ತು ನೆರುಗಳಲೆ ವ್ಯಾಪ್ತಿಯ ಹಲವು ಕುಟುಂಬದವರಿಗೆ 94ಸಿ ರಡಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಕ್ಕುಪತ್ರ ವಿತರಿಸಿದರು. ಬಳಿಕ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಬದುಕು ನಡೆಸಬೇಕು. ಯಾವುದೇ ಕಾರಣಕ್ಕೂ ಹಕ್ಕುಪತ್ರ ಮಾರಿಕೊಳ್ಳಬಾರದು ಎಂದು ಅವರು ಸಲಹೆ ಮಾಡಿದರು. ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಇತರರು ಇದ್ದರು.