ಸೋಮವಾರಪೇಟೆ,ಜ.24: ತಾಲೂಕು ಆಡಳಿತ, ತಾಲೂಕು ಕಾನೂನು ಸೇವಾ ಪ್ರಾಧಿಕಾರ, ವಿಶ್ವಮಾನವ ಕುವೆಂಪು ಶಿಕ್ಷಣ ಸಂಸ್ಥೆ ಮತ್ತು ಬಿಟಿಸಿಜಿ ಪದವಿ ಪೂರ್ವ ಕಾಲೇಜು ಇವರ ಆಶ್ರಯದಲ್ಲಿ ಶಾಲಾ ಸಭಾಂಗಣದಲ್ಲಿ ತಾ. 25ರಂದು (ಇಂದು) ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ ಎಂದು ತಹಶೀಲ್ದಾರ್ ಆರ್.ಗೋವಿಂದರಾಜು ತಿಳಿಸಿದ್ದಾರೆ.
ಬೆಳಗ್ಗೆ 9.45ಕ್ಕೆ ಜೆಎಂಎಫ್‍ಸಿಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿವಪುತ್ರ ಆರ್.ದಿಂಡಲಕೊಪ್ಪ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ, ತಾ.ಪಂ. ಇ.ಒ. ಸುನೀಲ್ ಕುಮಾರ್, ಬಿಇಒ ಎಚ್.ಕೆ.ಪಾಂಡು, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ವಿದ್ಯಾಸಂಸ್ಥೆಯ ಭಾತ್ಮೀದಾರರಾದ ಕೆ.ಎಂ.ಜಗದೀಶ್, ವಕೀಲರಾದ ಎಂ.ಬಿ. ಅಭಿಮನ್ಯು ಕುಮಾರ್, ಎಚ್.ಎಸ್. ವೆಂಕಟೇಶ್ ಭಾಗವಹಿಸಲಿದ್ದಾರೆ.