ಮಡಿಕೇರಿ, ಜ. 24: ಹೊದ್ದೂರು-ಕಬಡಕೇರಿ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನಮಂತ್ರಿ ಪೋಷಣ್ ಅಭಿಯಾನ, ಬೇಬಿ ಶೋ ಹಾಗೂ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಡೆಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಆರ್. ಸುಶೀಲಾ ವಹಿಸಿದ್ದರು. ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಕೋಮಲ, ವೇದಾವತಿ, ಸ್ಥಳೀಯರಾದ ಕೋರನ ಪದ್ಮಾ, ಚೆಟ್ಟಿಮಾಡ ರಂಜನಿ, ಗ್ರಾ.ಪಂ. ಆಡಳಿತಾಧಿಕಾರಿ ಅಬ್ದುಲ್ಲಾ ಭಾಗವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಸವಿತಾ ಕೀರ್ತನ್ ಹಾಗೂ ಕೆ. ಶೀಲಾ ಅವರನ್ನು ಸನ್ಮಾನಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ತಂಸೀನಾ ಬಾನು ಸ್ವಾಗತಿಸಿ, ಆಶಾ ಕಾರ್ಯಕರ್ತೆ ಮುಮ್ತಾಜ್ ವಂದಿಸಿದರು.