ಸೋಮವಾರಪೇಟೆ,ಜ.24: ಸಮೀಪದ ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಗಣರಾಜ್ಯೋತ್ಸವ ಸಮಾರಂಭ ತಾ.26ರಂದು, ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ತಂಗಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 9.30ಕ್ಕೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಗಟ್ಟಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ವಿದ್ಯಾರ್ಥಿಗಳ ಆಟೋಟ ಸ್ಪರ್ಧೆಯನ್ನು ಪೋಷಕರ ಸಮಿತಿ ಅಧ್ಯಕ್ಷ ರಾಜಣ್ಣ ಉದ್ಘಾಟಿಸ ಲಿದ್ದು, ಸಾರ್ವಜನಿಕರ ಆಟೋಟ ಸ್ಪರ್ಧೆಗಳಿಗೆ ಗಣಗೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ಶಿವದಾಸ್ ಚಾಲನೆ ನೀಡಲಿದ್ದಾರೆ. ಸಾಂಸ್ಕøತಿಕ ಕಾರ್ಯಕ್ರಮವನ್ನು ಶಾಲಾ ನಾಮ ನಿರ್ದೇಶಿತ ಸದಸ್ಯೆ ಎಂ.ಸಿ. ಲಲಿತಾ, ಮಕ್ಕಳ ಸಂತೆಯನ್ನು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಜಿ. ಅಜಿತ್‍ಕುಮಾರ್ ಉದ್ಘಾಟಿಸಲಿದ್ದಾರೆ.

ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಪದ್ಮಾವತಿ ವಿಶ್ವನಾಥ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಎಚ್. ತಿಮ್ಮಯ್ಯ, ಜಿ.ಪಂ ಸದಸ್ಯೆ ಪೂರ್ಣಿಮಾ ಗೋಪಾಲ್, ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಉದ್ಯಮಿ ಹರಪಳ್ಳಿ ರವೀಂದ್ರ, ತಾ.ಪಂ ಸದಸ್ಯೆ ಸವಿತಾ ಈರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಪಿ.ಎಸ್. ಮಚ್ಚಾಡೊ, ಬಿಇಒ ಎಚ್.ಕೆ. ಪಾಂಡು ಅವರುಗಳು ಪಾಲ್ಗೊಳ್ಳಲಿ ದ್ದಾರೆ. ಮುಖ್ಯ ಭಾಷಣಕಾರರಾಗಿ ಕೂಡಿಗೆ ಡಯಟ್‍ನ ಹಿರಿಯ ಉಪನ್ಯಾಸಕ ಕೆ.ಎಸ್. ಶಿವಕುಮಾರ್ ಭಾಗವಹಿಸಲಿದ್ದು, ಇದೇ ಸಂದರ್ಭ 10ನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಫಾರ್ಮರ್ಸ್ ರಿಕ್ರಿಯೇಷನ್ ಕ್ಲಬ್ ವತಿಯಿಂದ ನಗದು ಬಹುಮಾನ ನೀಡಲಾಗುವದು.