ಮಡಿಕೇರಿ, ಜ. 24: ನಗರದ ನಾಡ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವು ಉಪ ವಿಭಾಗಾಧಿಕಾರಿ ಟಿ. ಜವರೇಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.

ಅರ್ಹ ಫಲಾನುಭವಿಗಳಿಗೆ ಪಿಂಚಣಿ ಆದೇಶವನ್ನು ನೀಡಿದರು. ಮಡಿಕೇರಿ ಹೋಬಳಿಗೆ ಸಂಬಂಧಿಸಿದಂತೆ 9 ವೃತ್ತಗಳ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರವನ್ನು ನೀಡಿದರು. ಅಂಗವಿಕಲ ವೇತನ, ವೃದ್ಧಾಪ್ಯ ವೇತನ, ವಿಧವಾ ವೇತನ, ಮನಸ್ವಿನಿ ವೇತನಗಳ ಆದೇಶವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಈ ವೇಳೆ ಅರ್ಹ ಫಲಾನುಭವಿಗಳಿಂದ ಹೊಸ ಅರ್ಜಿಗಳನ್ನು ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸ್ವೀಕರಿಸಲಾಯಿತು. ಪಿಂಚಣಿ ಸಂಬಂಧ ಸಮಸ್ಯೆಗಳನ್ನು ಆಲಿಸಿ ಅರ್ಜಿದಾರರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಕಂದಾಯ ಪರಿವೀಕ್ಷಕ ಶ್ರೀನಿವಾಸ್ ಹಾಗೂ ತಾಲೂಕು ವ್ಯಾಪ್ತಿಯ ಗ್ರಾಮ ಲೆಕ್ಕಿಗರು ಹಾಜರಿದ್ದರು.