ಮಡಿಕೇರಿ, ಜ. 24: ಮಂಗಳೂರು ವಿಶ್ವ ವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವು ಪ್ರಕಟಗೊಂಡಿದ್ದು, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ಯೋಗ ಡಿಪ್ಲೊಮಾ ವಿದ್ಯಾರ್ಥಿನಿ ಡಾ. ಈಶ್ವರಿ, ದಾಖಲೆಯ ಅಂಕಗಳೊಂದಿಗೆ ಮೊದಲ ರ್ಯಾಂಕ್ ಗಳಿಸಿದ್ದಾರೆ. ಇವರು ಈ ಹಿಂದೆ ಗುಲಬರ್ಗಾ ವಿಶ್ವ ವಿದ್ಯಾನಿಲಯದಲ್ಲಿ ಮೊದಲ ರ್ಯಾಂಕ್ ನೊಂದಿಗೆ ಆಯುರ್ವೇದ ಪದವಿಯನ್ನು ಪಡೆದುಕೊಂಡಿದ್ದರು. ಪ್ರಸ್ತುತ ಮಡಿಕೇರಿ ಮತ್ತು ವೀರಾಜಪೇಟೆ ಸರಕಾರಿ ಆಯುರ್ವೇದ ಆಸ್ಪತ್ರೆಗಳಲ್ಲಿ ಹಿರಿಯ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಫೆಬ್ರವರಿ ತಿಂಗಳಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪದವಿ ಪ್ರದಾನ ಸಮಾರಂಭ ನಡೆಯಲಿದೆ.