ಪೊನ್ನಂಪೇಟೆ, ಜ.25: ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ತಾ.27 ರಂದು (ನಾಳೆ) ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಬೇಗೂರಿನ ಸಾರ್ವ ಜನಿಕರಿಗೆ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ಕ್ರೀಡಾಕೂಟದ ಉದ್ಘಾಟನೆಯನ್ನು ಬೇಗೂರು ಅಯ್ಯಪ್ಪ ಸ್ವ ಸಹಾಯ ಸಂಘದ ಅಧ್ಯಕ್ಷ ಮತ್ರಂಡ ಎಂ. ಮನು ಸೋಮಯ್ಯ ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೇಗೂರು ಸ.ಹಿ.ಪ್ರಾ. ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕಾರಪಂಡ ದಮಯಂತಿ ಉತ್ತಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯೆ ಮಾಚಿಮಾಡ ಜಾನಕಿ ಮಾಚಯ್ಯ, ವೀರಾಜಪೇಟೆ ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ, ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ, ನಿವೃತ್ತ ಮುಖ್ಯ ಶಿಕ್ಷಕಿ ತುಂತಜೆ ಹೇಮಾವತಿ ಜನಾರ್ಧನ್, ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಜಾ ಶಾಜಿ, ವೀರಾಜಪೇಟೆ ತಾ.ಪಂ. ಉಪಾಧ್ಯಕ್ಷ ನೆಲ್ಲಿರ ಚಲನ್ಕುಮಾರ್, ಹುದಿಕೇರಿ ಗ್ರಾ.ಪಂ.ಅಧ್ಯಕ್ಷೆ ಕಳ್ಳೆಂಗಡ ಸುಧಾ ರಮೇಶ್, ಮಾಜಿ ಗ್ರಾ.ಪಂ. ಅಧÀ್ಯಕ್ಷೆ ಮತ್ರಂಡ ರೇಖಾ ಪೊನ್ನಪ್ಪ, ಗ್ರಾ.ಪಂ. ಸದಸ್ಯರಾದ ಮತ್ರಂಡ ಶಮ್ಮಿ ಸೋಮಣ್ಣ, ಮಂಡೇಚಂಡ ಹರಿಣಿ ತಿಲಕ್, ಜೇನು ಕುರುಬರ ಕಾಳು, ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ಕ್ಷೇತ್ರ ಸಮನ್ವಯಾಧಿಕಾರಿ ವನಜಾಕ್ಷಿ, ಶಿಕ್ಷಣ ಸಂಯೋಜಕ ಪೊಯಂಗಡ ಆರ್. ಅಯ್ಯಪ್ಪ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಯವಂಡ ಪಿ. ಉತ್ತಪ್ಪ, ವೀರಾಜಪೇಟೆ ಪ್ರಾ.ಶಾ.ಶಿ. ಸಂಘದ ಅಧ್ಯಕ್ಷ ಸುರೇಂದ್ರ, ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಾಡ ಜೀವನ್ ಇನ್ನಿತರರು ಭಾಗವಹಿಸ ಲಿದ್ದಾರೆ. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯ ಕ್ರಮ ಹಾಗೂ ಗೋಣಿಕೊಪ್ಪಲು ಕಾವೇರಿ ಕಲಾಸಿರಿ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.