ಮಡಿಕೇರಿ, ಜ.25: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಜಿಲ್ಲಾಡಳಿತ ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 121 ನೇ ಜನ್ಮದಿನಾಚರಣೆ ಸಮಾರಂಭವು ತಾ. 28 ರಂದು ಬೆಳಗ್ಗೆ 11.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ನಡೆಯಲಿದೆ.
ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಎಂ.ಸಿ.ನಾಣಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷ ಕರ್ನಲ್ ಕೆ.ಸಿ.ಸುಬ್ಬಯ್ಯ, ಸಂಚಾಲಕ ಮೇಜರ್ ಬಿ.ಎ.ನಂಜಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.
ನಂತರ ಸಮಾರೋಪ ಸಮಾರಂಭವು ಮಧ್ಯಾಹ್ನ 2 ಗಂಟೆಗೆ ಜನರಲ್ ತಿಮ್ಮಯ್ಯ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ರಂಗಾಯಣದ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪ, ಅಧ್ಯಕ್ಷ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಎ.ಸಿ.ಗಿರೀಶ್ ಇತರರು ಪಾಲ್ಗೊಳ್ಳಲಿದ್ದಾರೆ.