ಮಡಿಕೇರಿ, ಜ. 27: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾ. 31ರಂದು ಬೆಳಿಗ್ಗೆ 10.30 ಗಂಟೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ವೈದ್ಯಾಧಿಕಾರಿ ಡಾ. ಕರುಂಬಯ್ಯ ಹಾಗೂ ಕಾಲೇಜಿನ ಪ್ರಾಂಶುಪಾಲೆ ಚೈತ್ರಾ ಮತ್ತು ಬೋಧಕ ವರ್ಗ ವಿದ್ಯಾರ್ಥಿಗಳು ಪಾಲ್ಗೊಳ್ಳಲಿ ದ್ದಾರೆ ಎಂದು ಪ್ರಕಟಣೆ ತಿಳಿಸಿದೆ.