ಮಡಿಕೇರಿ, ಫೆ.2 : ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವು ಶನಿವಾರ ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಸಲಾಯಿತು.

ಕಾರ್ಯಾಗಾರದಲ್ಲಿ ಮಕ್ಕಳ ಆರೋಗ್ಯ ಅಧಿಕಾರಿ ಡಾ.ಗೋಪಿನಾಥ್ ಮಾತನಾಡಿ, ತಾ. 10 ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

1 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡಬೇಕಿದೆ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಸಂಬಂಧಿಸಿದ ನೋಡೆಲ್ ಅಧಿಕಾರಿಗಳು, ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಾಂಶುಪಾಲರುಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಎಂದರು.

ವೀರಾಜಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಯತಿರಾಜ್, ಸೋಮವಾರಪೇಟೆ ತಾಲೂಕಿನ ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ಮತ್ತು ಜಿಲ್ಲೆಯ ಪ್ರಾಥಮಿಕ ಕೇಂದ್ರಗಳ ವೈದ್ಯಾಧಿಕಾರಿಗಳು ಪಾಲ್ಗೊಂಡಿದ್ದರು.