ಸೋಮವಾರಪೇಟೆ, ಫೆ.1: ತಾ.4 ರಂದು ಶನಿವಾರಸಂತೆಯಲ್ಲಿ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸಂಸ್ಮರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ತಿಳಿಸಿದರು.
ಅಂದು ಬೆಳಿಗ್ಗೆ 10 ಗಂಟೆಗೆ ತ್ರಿವಿಧ ದಾಸೋಹಿಗಳು, ನಡೆದಾಡುವ ದೇವರೆಂದೇ ಪ್ರಸಿದ್ಧಿ ಪಡೆದಿದ್ದ ಲಿಂಗೈಕ್ಯ ಶಿವಕುಮಾರ ಮಹಾಸ್ವಾಮಿಗಳ ಪ್ರಥಮ ವಾರ್ಷಿಕ ಪುಣ್ಯಸಂಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಶನಿವಾರಸಂತೆಯ ಕಿತ್ತೂರುರಾಣಿ ಚೆನ್ನಮ್ಮ ವೃತ್ತದಿಂದ ಗುಡುಗಳಲೆ ಜಾತ್ರಾ ಮೈದಾನದವರೆಗೆ ನಂದಿಧ್ವಜ, ವೀರಗಾಸೆ ಕಲಾತಂಡದೊಂದಿಗೆ ಮೆರವಣಿಗೆ ನಡೆಯಲಿದೆ. ನಂತರ ಜಾತ್ರಾ ಮೈದಾನದಲ್ಲಿ ಪುಣ್ಯಸಂಸ್ಮರಣೆ ಸಮಾರಂಭ ನಡೆಯಲಿದೆ.