ಸಿದ್ದಾಪುರ, ಫೆ. 1: ಸಿದ್ದಾಪುರದ ಸಂತ ಅನ್ನಮ್ಮ ಶಾಲೆಯಲ್ಲಿ ಮಕ್ಕಳಿಂದ ತಯಾರಿಸಲ್ಪಟ್ಟ ವಿಜ್ಞಾನ ಮಾದರಿಯ ವಸ್ತು ಪ್ರದರ್ಶನವನ್ನು ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಉದ್ಘಾಟಿಸಿದರು. ವಸ್ತು ಪ್ರದರ್ಶನದಲ್ಲಿ ಒಂದರಿಂದ 7ನೇ ತರಗತಿಯವರೆಗಿನ ಮಕ್ಕಳು ತಯಾರಿಸಿದ ವಿವಿಧ ವಸ್ತುಗಳ ಪ್ರದರ್ಶನವನ್ನು ವೀಕ್ಷಿಸಲು ಸಿದ್ದಾಪುರ ಸುತ್ತಮುತ್ತಲಿನ ಶಾಲಾ ವಿದ್ಯಾರ್ಥಿಗಳು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಫ್ಲೊರಾ ಹಾಗೂ ಆಡಳಿತ ಮಂಡಳಿ, ಶಿಕ್ಷಕ ವೃಂದದವರು ಹಾಜರಿದ್ದರು.