ಮಡಿಕೇರಿ,ಫೆ. 1: ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಯವರ ಪ್ರಥಮ ಪುಣ್ಯ ಸಂಸ್ಮರಣೋತ್ಸವ ತಾ. 4 ರಂದು ಗುಡುಗಳಲೆ ಜಾತ್ರಾ ಮೈದಾನದಲ್ಲಿ ನಡೆಯಲಿದೆ ಎಂದು ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿಗಳು ತಿಳಿಸಿದ್ದಾರೆ.
ಶ್ರೀ ಶಿವಕುಮಾರ ಮಹಾಸ್ವಾಮಿಗಳ ಭಕ್ತ ಮಂಡಳಿ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ವತಿಯಿಂದ ತಾ. 4 ರಂದು ಬೆಳಿಗ್ಗೆ 10 ಗಂಟೆಯಿಂದ ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಗುಡುಗಳಲೆ ಜಾತ್ರಾ ಮೈದಾನದವರೆಗೆ ನಂದಿ ಧ್ವಜ ಕುಣಿತ, ಮಂಗಳವಾದ್ಯದೊಂದಿಗೆ ಸಿದ್ಧಗಂಗಾಶ್ರೀಗಳ ಭಾವಚಿತ್ರದ ಮೆರವಣಿಗೆ ಸಾಗಲಿದೆ. ನಂತರ ಸಭಾ ಕಾರ್ಯಕ್ರಮ ಮತ್ತು ಮಧ್ಯಾಹ್ನ ಅನ್ನ ದಾಸೋಹ ನಡೆಯಲಿದೆ.
ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಮಠಾಧೀಶರು, ಧಾರ್ಮಿಕ ಮುಖಂಡರು, ಶ್ರೀ ಸಿದ್ಧಗಂಗಾ ಮಠದ ಭಕ್ತರು ಭಾಗವಹಿಸಲಿದ್ದು, ಸಾರ್ವಜನಿಕರು ಜಾತ್ಯತೀತವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶ್ರೀ ಸದಾಶಿವ ಸ್ವಾಮೀಜಿ ಮನವಿ ಮಾಡಿದ್ದಾರೆ.