ಕುಶಾಲನಗರ, ಫೆ. 1: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕುಶಾಲನಗರ ವ್ಯಾಪ್ತಿಯ ದೇವಾಲಯಗಳಿಗೆ ಕಸದಬುಟ್ಟಿಗಳನ್ನು ವಿತರಣೆ ಮಾಡಲಾಯಿತು.
ನಮ್ಮೂರು ನಮ್ಮ ಶ್ರದ್ಧಾ ಕೇಂದ್ರ ಎಂಬ ಯೋಜನೆಯಡಿ ಹಳ್ಳಿ ಹಳ್ಳಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳಲಾಗಿತ್ತು. ಜನವರಿ 7 ರಿಂದ 13 ರವರೆಗೆ ರಾಜ್ಯಾದ್ಯಂತ ಸ್ವಚ್ಛತಾ ಸಪ್ತಾಹವನ್ನು ಆಚರಿಸಿ ಮಕರ ಸಂಕ್ರಾಂತಿಗೆ ಪೂರ್ವಭಾವಿಯಾಗಿ ಶ್ರದ್ಧಾ ಕೇಂದ್ರ ಸ್ವಚ್ಛತೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕುಶಾಲನಗರದ 9 ದೇವಾಲಯಗಳ ಪ್ರಮುಖರಿಗೆ ಕಸದ ಬುಟ್ಟಿಗಳನ್ನು ಕುಶಾಲನಗರ ವಲಯ Pಚೇರಿಯಲ್ಲಿ ವಿತರಣೆ ಮಾಡಲಾಯಿತು.
ಈ ಸಂದರ್ಭ ಯೋಜನೆಯ ಕುಶಾಲನಗರ ವಲಯ ಮೇಲ್ವಿಚಾರಕ ಹರೀಶ್, ಗಣಪತಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರಾದ ವಸಂತಕುಮಾರ್, ಕಾರ್ಯದರ್ಶಿ ಶ್ರೀನಿವಾಸರಾವ್, ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಗಣಪತಿ, ಗುಡ್ಡೆಹೊಸೂರು ಬೊಳ್ಳೂರು ಬಸವೇಶ್ವರ ದೇವಸ್ಥಾನದ ಅಧ್ಯಕ್ಷ ಸಿದ್ದಲಿಂಗಪ್ಪ, ಕುಶಾಲನಗರ ಕೊಡವ ಸಮಾಜದ ಮಾಜಿ ಅಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಯೋಜನೆಯ ಸೇವಾ ಪ್ರತಿನಿಧಿಗಳಾದ ಜಯಲಕ್ಷ್ಮಿ, ವಿಜಯಲಕ್ಷ್ಮಿ, ಭಾಗ್ಯ, ಡಾಟಿ ಮತ್ತಿತರರು ಇದ್ದರು.