ಸೋಮವಾರಪೇಟೆ: ಜಿಲ್ಲಾ ಪಂಚಾಯಿತಿ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ತಾಲೂಕಿನ ಹೊಸತೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾ ಪರಿಕರಗಳನ್ನು ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ಕ್ರಿಕೆಟ್ ಬ್ಯಾಟ್, ಕೇರಂ ಬೋರ್ಡ್, ಫುಟ್ಬಾಲ್, ವಾಲಿಬಾಲ್ ಸೇರಿದಂತೆ ಇನ್ನಿತರ ಪರಿಕರಗಳನ್ನು ಜಿ.ಪಂ. ಸದಸ್ಯೆ ಕುಮುದ ಧರ್ಮಪ್ಪ ವಿತರಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಗೌತಮ್ ಶಿವಪ್ಪ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹೊಸತೋಟ ಸಲೀಂ, ಮುಖ್ಯಶಿಕ್ಷಕಿ ಪವಿತ್ರ, ಶಿಕ್ಷಕರಾದ ಅಂಜಲಿಕ, ರವಿ ಶಂಕ್ರಪ್ಪ, ಕೆಂಚವ್ವ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಶನಿವಾರಸಂತೆ: ಪಟ್ಟಣದ ಯಶಸ್ವಿ ಕಲ್ಯಾಣ ಮಂಟಪದಲ್ಲಿ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಮಾರ್ಷಿಯಲ್ ಆಟ್ರ್ಸ್ ಮತ್ತು ಯೋಗ ಸಂಸ್ಥೆ ವತಿಯಿಂದ ನಡೆದ ರಾಜ್ಯಮಟ್ಟದ ಕರಾಟೆ ಮತ್ತು ಯೋಗ ಟೂರ್ನಿಯಲ್ಲಿ ಸ್ಥಳೀಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಹಾಗೂ ಬ್ಲ್ಯಾಕ್ ಬೆಲ್ಟ್ ಪಡೆದಿದ್ದಾರೆ.

ವಿದ್ಯಾರ್ಥಿಗಳಾದ ಚಿನ್ಮಯಿ, ದಿಗಂತ್, ರೋಚನಾ, ಕೌಶಿ, ಗೋಕುಲ್, ಅಕ್ಷರ್, ಸೂರಜ್, ಧಾತ್ರಿ, ಅದ್ವೈತ್, ಜನಿತ್, ಅಖಿಲೇಶ್, ಶ್ರೀರಾಮ್, ಶರವಣ್ಯ, ದೀಕ್ಷಾ, ಅಂಕಿತ್ ಪ್ರಶಸ್ತಿ ಪಡೆದಿದ್ದಾರೆ. ಮಯೂರ್, ಶೋಭಿತ್, ಹೇಮಂತ್, ಧನುಷ್, ಆಕಾಶ್, ವಿನಯ್, ಭಾವನಾ, ವಿಖ್ಯಾತ್, ಮನೀಸ್, ಸೌನಜ್ಯ, ತೇಜಸ್ ಬ್ಲ್ಯಾಕ್ ಬೆಲ್ಟ್ ಗಳಿಸಿದ್ದಾರೆ. ಸಂಸ್ಥೆಯ ಗುರುಗಳಾದ ಅರುಣ್, ಸಚಿನ್, ಕಿರಣ್, ಪಳನಿ, ವಿನಯ್, ಸಂಜಯ್, ಭರತ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

ಸೋಮವಾರಪೇಟೆ: ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನ ಎಸ್.ಸಿ.-ಎಸ್.ಟಿ. ಮತ್ತು ಅಲ್ಪಸಂಖ್ಯಾತ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಅಂತೋಣಿ ರಾಜ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಾಲಕೃಷ್ಣ ರೈ ಅವರು ಭಾಗವಹಿಸಿ ಪ್ರಶಸ್ತಿ ಹಾಗೂ ಬ್ಲ್ಯಾಕ್ ಬೆಲ್ಟ್ ಪಡೆದಿದ್ದಾರೆ.

ವಿದ್ಯಾರ್ಥಿಗಳಾದ ಚಿನ್ಮಯಿ, ದಿಗಂತ್, ರೋಚನಾ, ಕೌಶಿ, ಗೋಕುಲ್, ಅಕ್ಷರ್, ಸೂರಜ್, ಧಾತ್ರಿ, ಅದ್ವೈತ್, ಜನಿತ್, ಅಖಿಲೇಶ್, ಶ್ರೀರಾಮ್, ಶರವಣ್ಯ, ದೀಕ್ಷಾ, ಅಂಕಿತ್ ಪ್ರಶಸ್ತಿ ಪಡೆದಿದ್ದಾರೆ. ಮಯೂರ್, ಶೋಭಿತ್, ಹೇಮಂತ್, ಧನುಷ್, ಆಕಾಶ್, ವಿನಯ್, ಭಾವನಾ, ವಿಖ್ಯಾತ್, ಮನೀಸ್, ಸೌನಜ್ಯ, ತೇಜಸ್ ಬ್ಲ್ಯಾಕ್ ಬೆಲ್ಟ್ ಗಳಿಸಿದ್ದಾರೆ. ಸಂಸ್ಥೆಯ ಗುರುಗಳಾದ ಅರುಣ್, ಸಚಿನ್, ಕಿರಣ್, ಪಳನಿ, ವಿನಯ್, ಸಂಜಯ್, ಭರತ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

ಸೋಮವಾರಪೇಟೆ: ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನ ಎಸ್.ಸಿ.-ಎಸ್.ಟಿ. ಮತ್ತು ಅಲ್ಪಸಂಖ್ಯಾತ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಅಂತೋಣಿ ರಾಜ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಾಲಕೃಷ್ಣ ರೈ ಅವರು ಕಾಲೇಜಿನ ಪ್ರಾಂಶುಪಾಲ ಅಂತೋಣಿರಾಜ್ ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

ಸೋಮವಾರಪೇಟೆ: ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಮತ್ತು ಯೋಗ ಸಂಸ್ಥೆಯ ವತಿಯಿಂದ ಶನಿವಾರಸಂತೆಯ ಯಶಸ್ವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 9ನೇ ರಾಜ್ಯಮಟ್ಟದ ಕರಾಟೆ ಹಾಗೂ ಯೋಗ ಸ್ಪರ್ಧೆಯಲ್ಲಿ ಸೋಮವಾರಪೇಟೆ ಪಟ್ಟಣದ ಕರಾಟೆಪಟುಗಳು ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ.

ದುರ್ಗೆಶ್, ಶಶಾಂಕ್, ಸೌಜನ್ಯ, ಸೃಜನ, ಸುಪ್ರಿತ, ಜನನ್, ಚಿಂತನ್, ಸಂಜನ್, ಅನುಶ್ರೀ, ನಿಖಿಲ್, ಧನ್ಯಶ್ರೀ, ಹೃಷಿಕೇಶ್, ಆಕಾಶ್, ಪ್ರಖ್ಯಾತ್, ಯದುನಂದನ್, ಸಮೃದ್, ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಪ್ರತೀಕ್ಷ, ಅನನ್ಯ, ಸಿಂಚನ, ಬಿ.ಜೆ.ಜಸ್ವೀನ್ ಶ್ರೀವಾಸ್ತ, ದರ್ಶನ್, ಅರ್ಜುನ್, ಮಂಜುನಾಥ್, ರಿತೀಶ್, ಮನಶ್ರೀ, ಶೋಭಿತ, ಯಶಸ್ವಿನಿ, ರಾಕೇಶ್, ರಿತೇಶ್, ಸ್ಪರ್ಶ್, ಪ್ರತೀಕ್, ಅವರುಗಳು ಭಾಗವಹಿಸಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಚೆಟ್ಟಳ್ಳಿ: ಸ್ಥಳೀಯ ಇಕ್ರಾ ಪಬ್ಲಿಕ್ ಶಾಲಾ ವಾರ್ಷಿಕೋತ್ಸವ ಅಂಗವಾಗಿ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ನೃತ್ಯ ವೈಭವ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು.

ವಿವಿಧ ಭಾಷೆಗಳ ಸಂಗೀತಕ್ಕೆ ಶಾಲಾ ವಿದ್ಯಾರ್ಥಿಗಳು ನೃತ್ಯ ಮಾಡುವ ಮೂಲಕ ನೆರೆದಿದ್ದವರ ಗಮನ ಸೆಳೆದರು. ಈ ಸಂದರ್ಭ ಪರೀಕ್ಷೆಯಲ್ಲಿ ಹೆಚ್ಚು ಅಂಕ ಹಾಗೂ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸಮಾರಂಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ. ಎಸ್. ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶಾಲೆ ಮಾದರಿಯಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಮೂಲಕ ಸಮಾಜದಲ್ಲಿ ಸಾಧನೆ ಮಾಡುವುದರೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.

ವೀರಾಜಪೇಟೆ ಜೂನಿಯರ್ ಕಾಲೇಜು ಪ್ರಾಂಶುಪಾಲೆ ಎನ್.ಕೆ. ಜ್ಯೋತಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಗುರಿ ಸಾಧಿಸುವ ಛಲದೊಂದಿಗೆ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯುವ ಮೂಲಕ ಪ್ರತಿಭಾನ್ವಿತರಾಗಿ ಮುಂದೆ ಬರಬೇಕೆಂದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಕೆ.ಎಂ. ಭವಾನಿ ಮಾತನಾಡಿ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಗಳು ಹಲವು ಯೋಜನೆಗಳನ್ನು ನೀಡುತ್ತಿದೆ. ಇದರ ಸದ್ಬಳಕೆ ಮಾಡಿಕೊಂಡು ಪ್ರತಿಯೊಂದು ವಿದ್ಯಾರ್ಥಿಯು ಶಿಕ್ಷಣದ ಮೂಲಕ ಮುಂದೆ ಬರಬೇಕೆಂದರು.

ಇಕ್ರಾ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಕೆ.ಯು. ಅಬ್ದುಲ್ ರಜಾಕ್ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಶಾಲೆಯಲ್ಲಿ ಶಿಕ್ಷಕರ ಪ್ರಯತ್ನದಿಂದ ಹಲವಾರು ಮಂದಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದಿಂದ ತೇರ್ಗಡೆಯಾಗಿದ್ದಾರೆ. ವಿವಿಧ ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ತಾಲೂಕು, ಜಿಲ್ಲೆ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು

ಲಯನ್ಸ್ ಕ್ಲಬ್ ಸದಸ್ಯೆ ಖುಷಿ ಭೀಮಯ್ಯ ಮಾತನಾಡಿ, ಪ್ಲಾಸ್ಟಿಕ್ ನಿರ್ಮೂಲನೆಯೊಂದಿಗೆ ಪರಿಸರ ಹಾಗೂ ಶುಚಿತ್ವವನ್ನು ಕಾಪಾಡಿಕೊಂಡಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭ ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್, ಸಿದ್ದಾಪುರ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ. ಉಸ್ಮಾನ್ ಹಾಜಿ, ಇಕ್ರಾ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಶೀರ್, ಉಪಾಧ್ಯಕ್ಷ ಪಿ.ಪಿ ಉಮ್ಮರ್, ಪ್ರಧಾನ ಕಾರ್ಯದರ್ಶಿ ಕೆ.ಯು. ಮಜೀದ್, ಖಜಾಂಚಿ ಅಬ್ದುಲ್ ರವೂಫ್ ಹಾಜಿ, ಸದಸ್ಯರಾದ ಸಮೀರ್, ಶೌಕತ್ ಅಲಿ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದ್ದರು.

ಹೆಬ್ಬಾಲೆ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಿಂದಲೇ ಕಂಪ್ಯೂಟರ್ ಶಿಕ್ಷಣ ಕಲಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಶಿಕ್ಷಕರು ಹಾಗೂ ಪೋಷಕರು ಶ್ರಮಿಸಬೇಕು ಎಂದು ಕುಶಾಲನಗರ ಸರ್ಕಾರಿ ಪಿ.ಯು. ಕಾಲೇಜಿನ ಕಲಾ ಶಿಕ್ಷಕ ಉ.ರಾ. ನಾಗೇಶ್ ಸಲಹೆ ನೀಡಿದರು.

ಇಲ್ಲಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಗುರು ಹಿರಿಯರನ್ನು ಹಾಗೂ ಪೋಷಕರನ್ನು ಗೌರವಿಸಬೇಕು.

ಪ್ರಾಥಮಿಕ ಹಂತದಿಂದಲೇ ಓದುವ ಹವ್ಯಾಸವನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಬೇಕು ಎಂದು ಹೇಳಿದರು. ನಿವೃತ್ತ ಕೆಇಬಿ ಇಂಜಿನಿಯರ್ ಜಿ.ಎಲ್. ರಾಮಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಹೆಚ್ಚಿನ ಒತ್ತು ನೀಡಬೇಕು ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಎಸ್. ಶ್ರೀಧರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಬನಶಂಕರಿ ದೇವಾಲಯ ಸಮಿತಿ ಅಧ್ಯಕ್ಷ ಬಸವರಾಜು, ದಾನಿಗಳಾದ ಹೆಚ್.ಬಿ. ನಿಂಗಪ್ಪ, ನಿವೃತ್ತ ಶಿಕ್ಷಕ ನಿಂಗಪ್ಪ, ಹಿರಿಯ ಶಿಕ್ಷಕಿ ಟಿ.ಎ. ಮೀನಾಕ್ಷಿ, ನಾಗಮ್ಮ, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್.ಎಲ್. ರಮೇಶ್, ಹೆಚ್.ಎಸ್. ಮಧುಸೂದನ್, ಸದಸ್ಯ ಹೆಚ್.ಪಿ. ಮಂಜುನಾಥ್ ಕೆಳಹಟ್ಟಿ, ಹೆಚ್.ಆರ್. ಮಂಜುನಾಥ್, ಶಾಲಾಭಿವೃದ್ಧಿ ಉಪಾಧ್ಯಕ್ಷರು ಮತ್ತು ಸದಸ್ಯರು, ಶಾಲಾ ಮುಖ್ಯ ಶಿಕ್ಷಕ ಹೆಚ್.ಎಂ. ವೆಂಕಟೇಶ್ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕಿ ಪುಷ್ಪಾವತಿ ಸ್ವಾಗತಿಸಿದರು. ಸಿ.ಆರ್.ಪಿ. ಗಿರೀಶ್ ನಿರೂಪಿಸಿದರು. ಶಿಕ್ಷಕ ರಮೇಶ್ ವಂದಿಸಿದರು. ನಂತರ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಇದೇ ಸಂದರ್ಭ ನಿವೃತ್ತ ಶಿಕ್ಷಕರು, ದಾನಿಗಳನ್ನು ಸನ್ಮಾನಿಸಲಾಯಿತು.

ಸೋಮವಾರಪೇಟೆ: ಸಮೀಪದ ಗೆಜ್ಜೆಹಣಕೋಡು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯ ಸಮಿತಿ ವತಿಯಿಂದ ಶೈಕ್ಷಣಿಕ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಿತು. ದೇವಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಸಿ.ಎಂ. ಧರ್ಮಪ್ಪ ಅವರು, ವಿದ್ಯಾವಂತ ಮಕ್ಕಳು ಆಸ್ತಿಗಿಂತ ಮಿಗಿಲು ಎಂದು ಅಭಿಪ್ರಾಯಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್.ಮಹೇಶ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಕ್ರೀಡೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ತೋರುತ್ತಿರುವದು ಅಭಿನಂದನಾರ್ಹ ಎಂದರು.

ಸಮಾರಂಭದಲ್ಲಿ ಜರ್ಮನಿಯ ಕಾಸೆಲ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ.ಸುಪ್ರಿಯ ದಯಾನಂದ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ ಪೋಲ್ ವಾಲ್ಟ್ ಕ್ರೀಡಾಪಟು ಜಿ.ಎಸ್. ಪೂಜಿತ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸೋಮೇಶ್ವರ ಯುವಕ ಸಂಘದ ಅಧ್ಯಕ್ಷ ಶಶಿಧರ, ಬೇಲೂರಿನ ವಕೀಲರಾದ ಲಿಂಗರಾಜು ಹಾಗೂ ಗಿರಿಜಮ್ಮ ಧರ್ಮಪ್ಪ ಉಪಸ್ಥಿತರಿದ್ದರು.ಸುಂಟಿಕೊಪ್ಪ: ಕುಶಾಲನಗರ ಸಮೀಪದ ಚಿಕ್ಕ ಅಳವಾರ ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಇತಿಹಾಸ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳ ಘಟಕ ಮತ್ತು ಮಡಿಕೇರಿ ಪ್ರಾಚ್ಯ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸುಂಟಿಕೊಪ್ಪ ಸಮೀಪದ ಕಾಫಿ ಬೆಳೆಗಾರ ವಿನೋದ್ ಶಿವಪ್ಪ ಅವರ ಬೆಟ್ಟಗೇರಿ ತೋಟದಲ್ಲಿರುವ ಜೈನ ಬಸದಿಗೆ ಭೇಟಿ ನೀಡಿ ‘ಇತಿಹಾಸ ಅರಿವು ಕಾರ್ಯಕ್ರಮ ಮತ್ತು ಸ್ಮಾರಕ ಸ್ವಚ್ಛತಾ ಕಾರ್ಯವು ನಡೆಯಿತು.

ಸ್ನಾತಕೋತ್ತರ ಕೇಂದ್ರ ಸುಮಾರು 50 ವಿದ್ಯಾರ್ಥಿಗಳೊಂದಿಗೆ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಉದಯಕುಮಾರ್ ಅವರು ಭೇಟಿ ನೀಡಿ ಈ ಬಸದಿ ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಇದೊಂದು ತ್ರಿಕೂಟ ಬಸದಿಯಾಗಿದ್ದು, ಈ ವ್ಯಾಪ್ತಿಯಲ್ಲೂ ಜೈನ ಧರ್ಮ ಅಸ್ತಿತ್ವದಲ್ಲಿತ್ತು ಎಂಬುದಕ್ಕೆ ದೊಡ್ಡದಾದ ಬಸದಿಯೇ ಆಧಾರವಾಗಿದೆ. ಈ ಬಸದಿಯನ್ನು ಪುರಾತತ್ವ ಇಲಾಖೆ ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದ್ದರೂ ಇಲ್ಲಿಯ ಮಾಲೀಕರಾದ ವಿನೋದ್ ಶಿವಪ್ಪ ಅವರು ಇದಕ್ಕೆ ಚ್ಯುತಿ ಬರದಂತೆ ನೋಡಿಕೊಂಡಿರುವುದು ಶ್ಲಾಘನೀಯ. ಇಲ್ಲಿರುವ ಶಾಸನವು ನಶಿಸಿ ಹೋಗಿದ್ದು ಪುರಾತತ್ವ ಇಲಾಖೆ ಇತ್ತ ಗಮನಹರಿಸಿದರೆ ಇನ್ನಷ್ಟು ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದರು.

ಎನ್.ಎಸ್.ಎಸ್ ಘಟಕದ ಸಂಯೋಜಕ ಡಾ. ಗಂಗಾಧರ್ ಬಿ.ಜೋಶಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಸ್ವಚ್ಛತಾ ಕಾರ್ಯ ಮಾತ್ರವಲ್ಲ ಪ್ರಾಚ್ಯ ವಸ್ತುಗಳ, ಕಟ್ಟಡಗಳ ಮಾಹಿತಿಗಾಗಿ ಇತಿಹಾಸ ವಿದ್ಯಾರ್ಥಿಗಳೊಂದಿಗೆ ಬಂದಿದ್ದೇವೆ. ಅತ್ಯಂತ ದೊಡ್ಡ ಬಸದಿಯಾಗಿದ್ದು, ಯಾರೋ ಕಿಡಿಗೇಡಿಗಳು ಕಟ್ಟಡಕ್ಕೆ ಹಾನಿ ಮಾಡಲು ಪ್ರಯತ್ನಸಿರುವುದು ಸರಿಯಲ್ಲ. ಇದು ಎಲ್ಲರ ಸ್ವತ್ತು ಉಳಿಸುವುದು ನಮ್ಮ ಕರ್ತವ್ಯ ಎಂದರು.

ಉಪನ್ಯಾಸಕರಾದ ಅರುಣ್ ಕುಮಾರ್, ರುದ್ರಕುಮಾರ್, ಚಂದ್ರಯ್ಯ, ಮಮತ ಮತ್ತು ವಿದ್ಯಾರ್ಥಿಗಳು ಇದ್ದರು