ಮಡಿಕೇರಿ, ಫೆ. 10: ರಾಜ್ಯ ಬಿಜೆಪಿ ಸರ್ಕಾರ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ವಂಚಿಸುವ ಮೂಲಕ ಮತದಾರರ ಭಾವನೆಗಳಿಗೆ ದಕ್ಕೆ ಉಂಟು ಮಾಡಿದ್ದಾರೆ. ಜಿಲ್ಲೆಯ ಸಮಸ್ಯೆಗಳ ಗಂಭೀರತೆ ಸ್ಥಳೀಯ ಶಾಸಕರುಗಳಿಗೆ ಮಾತ್ರ ತಿಳಿದಿರುವುದರಿಂದ ಸಚಿವ ಸ್ಥಾನ ನೀಡುವ ಅಗತ್ಯವಿತ್ತು. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸುರೇಶ್ ಕುಮಾರ್ ಹಾಗೂ ಈಗಿನ ಸಚಿವ ವಿ.ಸೋಮಣ್ಣ ಅವರು ಜಿಲ್ಲೆಗೆ ಅಪರೂಪಕ್ಕೊಮ್ಮೆ ಬಂದು ಹೋಗಿದ್ದಾರೆ ಹೊರತು ಇಲ್ಲಿನ ಯಾವುದೇ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಟೀಕಿಸಿದ್ದಾರೆ.
ಇಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಜಿಲ್ಲೆಯ ಮಳೆಹಾನಿ ಸಂತ್ರಸ್ತರಿಗೆ ಸುಮಾರು ತಲಾ 10 ಲಕ್ಷ ರೂ. ವೆಚ್ಚದಲ್ಲಿ ಮನೆಗಳ ನಿರ್ಮಾಣ ಮತ್ತು ನಿರಾಶ್ರಿತರಾದವರಿಗೆ ಮನೆ ಬಾಡಿಗೆಯಾಗಿ ಮಾಸಿಕ ತಲಾ ಹತ್ತು ಸಾವಿರ ರೂ.ಗಳನ್ನು ವಿತರಿಸಿತ್ತು. ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಕಷ್ಟದಲ್ಲಿದ್ದವರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿದ್ದರು.
ಆದರೆ ಇಂದಿನ ಬಿಜೆಪಿ ನೇತೃತ್ವದ ಸರ್ಕಾರದಿಂದ ಕೊಡಗು ಜಿಲ್ಲೆಗೆ ಯಾವುದೇ ಲಾಭವಾಗಿಲ್ಲ. 2019 ರಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಮಡಿಕೇರಿ, ಫೆ. 10: ರಾಜ್ಯ ಬಿಜೆಪಿ ಸರ್ಕಾರ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ವಂಚಿಸುವ ಮೂಲಕ ಮತದಾರರ ಭಾವನೆಗಳಿಗೆ ದಕ್ಕೆ ಉಂಟು ಮಾಡಿದ್ದಾರೆ. ಜಿಲ್ಲೆಯ ಸಮಸ್ಯೆಗಳ ಗಂಭೀರತೆ ಸ್ಥಳೀಯ ಶಾಸಕರುಗಳಿಗೆ ಮಾತ್ರ ತಿಳಿದಿರುವುದರಿಂದ ಸಚಿವ ಸ್ಥಾನ ನೀಡುವ ಅಗತ್ಯವಿತ್ತು. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸುರೇಶ್ ಕುಮಾರ್ ಹಾಗೂ ಈಗಿನ ಸಚಿವ ವಿ.ಸೋಮಣ್ಣ ಅವರು ಜಿಲ್ಲೆಗೆ ಅಪರೂಪಕ್ಕೊಮ್ಮೆ ಬಂದು ಹೋಗಿದ್ದಾರೆ ಹೊರತು ಇಲ್ಲಿನ ಯಾವುದೇ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಟೀಕಿಸಿದ್ದಾರೆ.
ಇಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಜಿಲ್ಲೆಯ ಮಳೆಹಾನಿ ಸಂತ್ರಸ್ತರಿಗೆ ಸುಮಾರು ತಲಾ 10 ಲಕ್ಷ ರೂ. ವೆಚ್ಚದಲ್ಲಿ ಮನೆಗಳ ನಿರ್ಮಾಣ ಮತ್ತು ನಿರಾಶ್ರಿತರಾದವರಿಗೆ ಮನೆ ಬಾಡಿಗೆಯಾಗಿ ಮಾಸಿಕ ತಲಾ ಹತ್ತು ಸಾವಿರ ರೂ.ಗಳನ್ನು ವಿತರಿಸಿತ್ತು. ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಕಷ್ಟದಲ್ಲಿದ್ದವರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿದ್ದರು.
ಆದರೆ ಇಂದಿನ ಬಿಜೆಪಿ ನೇತೃತ್ವದ ಸರ್ಕಾರದಿಂದ ಕೊಡಗು ಜಿಲ್ಲೆಗೆ ಯಾವುದೇ ಲಾಭವಾಗಿಲ್ಲ. 2019 ರಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಮಾತನಾಡಿ ಇತ್ತೀಚೆಗೆ ನಡೆದ ಸಹಕಾರ ಸಂಘಗಳ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದು, ಮುಂಬರುವ ಗ್ರಾ.ಪಂ ಚುನಾವಣೆಯಲ್ಲೂ ಜಿಲ್ಲೆಯಾದ್ಯಂತ ಜೆಡಿಎಸ್ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ ಪಕ್ಷದ ಜಿಲ್ಲಾ ಘಟಕದಲ್ಲಿ ಯಾವುದೇ ಭಿನ್ನಾಭಿಪ್ರಾಯ ಅಥವಾ ಗುಂಪುಗಾರಿಕೆಗಳಿಲ್ಲ, ಎಲ್ಲರೂ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಫೆ. 16 ರಂದು ಕಚೇರಿ ಉದ್ಘಾಟನೆ
ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾ ಕಚೇರಿ ಫೆ. 16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಚೇಂಬರ್ ಆಫ್ ಕಾಮರ್ಸ್ ಕಟ್ಟಡದ ಮೊದಲನೆಯ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಕೆ.ಎಂ. ಗಣೇಶ್ ತಿಳಿಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಕಚೇರಿಯನ್ನು ಉದ್ಘಾಟಿಸಲಿದ್ದು, ಮಾಜಿ ಸಚಿವ ಸಾ.ರಾ. ಮಹೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್.ಡಿ. ರೇವಣ್ಣ, ಪಿರಿಯಾಪಟ್ಟಣದ ಶಾಸಕ ಕೆ.ಮಹದೇವು ಪಾಲ್ಗೊಳ್ಳಲಿದ್ದಾರೆ. ಮೈಸೂರು ಮಹಾಪೌರರಾದ ತಸ್ಲಿಂ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಗುವುದು ಎಂದರು.