ಮಡಿಕೇರಿ, ಫೆ.10: ಪ್ರಸಕ್ತ(2019-20) ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳು (20 ಅಂಶಗಳ ಕಾರ್ಯಕ್ರಮ ಒಳಗೊಂಡಂತೆ) 2020ರ ಜನವರಿ ಮಾಹೆಯ ಅಂತ್ಯದವರೆಗೆ ತಾ. 11 ರಂದು ನಡೆಯಬೇಕಿದ್ದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ತಾ. 12 ರಂದು ಬೆಳಗ್ಗೆ 11 ಗಂಟೆಗೆ ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ನೂತನ ಜಿ.ಪಂ.ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.