ಶನಿವಾರಸಂತೆ, ಫೆ. 12: ಶನಿವಾರಸಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಸಿ. ಶರತ್‍ಶೇಖರ್ ಮತ್ತು ಉಪಾಧ್ಯಕ್ಷರಾಗಿ ಸವಿತಾ ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದರೆ. ಅಧ್ಯಕ್ಷ ಶರತ್‍ಶೇಖರ್ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಸಂಘವು ನಮ್ಮ ಹಿಂದಿನ ಸೇವಾ ಅವಧಿಯಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದ್ದು, ತಾಲೂಕಿನಲ್ಲಿ ಪ್ರಥಮ ಬಹುಮಾನವನ್ನು ಪಡೆದಿದೆ. ಇನ್ನು ಮುಂದೆಯೂ ಕೂಡ ಪಕ್ಷಬೇಧ ಮರೆತು ಒಗ್ಗಟ್ಟಿನಿಂದ ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮತ್ತು ಸದಸ್ಯರಿಗೆ ಉತ್ತಮ ಸೌಲಭ್ಯವನ್ನು ನೀಡಲು ಶ್ರಮವಹಿಸಿ ಕೆಲಸ ನಿರ್ವಹಿಸುವ ಭರವಸೆ ನೀಡಿದರು.