ಮಡಿಕೇರಿ, ಫೆ. 12: ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಜಿಲ್ಲಾಸ್ಪತ್ರೆ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ, ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಬೆಂಗಳೂರು, ಸಂಪಾಜೆ, ಚೆಂಬು, ಪೆರಾಜೆ, ಮದೆನಾಡು ಗ್ರಾ.ಪಂ., ಊರುಬೈಲು ಶ್ರೀ ಭಗವಾನ್ ಸಂಘ, ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಕಲ್ಲುಗುಂಡಿ ನೆಲ್ಲಿಕುಮೇರಿ ಫ್ರೆಂಡ್ಸ್ ಕ್ಲಬ್ ಹಾಗೂ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಸಂಪಾಜೆ ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ದಿ. ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ತಾ. 14 ರಂದು ಬೆಳಿಗ್ಗೆ 9.30 ಗಂಟೆಗೆ ಸಂಪಾಜೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಕುಮಾರ್ ಚೆದ್ಕಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಕಿಶೋರ್ ಕುಮಾರ್ ಪಿ.ಬಿ., ಸ್ಥಾಪಕಾಧ್ಯಕ್ಷ ಎನ್.ಎಸ್. ದೇವಿಪ್ರಸಾದ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ, ಡಿಹೆಚ್‍ಒ ಡಾ. ಕೆ. ಮೋಹನ್, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಎನ್. ಆನಂದ್, ಮಡಿಕೇರಿ ತಾಲೂಕು ವೈದ್ಯಾಧಿಕಾರಿಗಳಾದ ಡಾ. ಗೋಪಿನಾಥ್, ಡಾ. ಸಂದೀಪ ನಾಯಕ್, ಸಂಪಾಜೆ ಗ್ರಾ.ಪಂ. ಸದಸ್ಯರಾದ ರಮಾದೇವಿ ಕಳಗಿ, ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಅಧ್ಯಕ್ಷೆ ಚಂದ್ರಕಲಾ ಬಾಯಿ ಎಲ್, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿನುತ್ ಹೆಚ್.ಎಸ್. ಇತರರು ಪಾಲ್ಗೊಳ್ಳಲಿದ್ದಾರೆ.