ಮಡಿಕೇರಿ, ಫೆ. 12: ಗುಜರಾತಿನ ವಡೋದರದಲ್ಲಿ ಜರುಗಿದ ರಾಷ್ಟ್ರಮಟ್ಟದ ಹಿರಿಯ ನಾಗರಿಕರ ಕ್ರೀಡಾಕೂಟದಲ್ಲಿ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ನಾಂಗಾಲದ ಚೇಮೀರ ಸೀತಮ್ಮ ಭಾಗವಹಿಸಿ ಸಾಧನೆ ತೋರಿದ್ದಾರೆ. ಅವರು ಭಾರದ ಗುಂಡು ಎಸೆತ, ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈಟಿ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು; ಮುಂದೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯಲಿರುವ ಅಂತರ್ರಾಷ್ಟ್ರೀಯ ಸ್ಪರ್ಧೆಗೆ ಅರ್ಹತೆಯೊಂದಿಗೆ ಇವರು ಹಲವಷ್ಟು ಪದಕ ಪಡೆದಿದ್ದಾರೆ.