ಸೋಮವಾರಪೇಟೆ, ಫೆ. 13: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಅಡುಗೆ ಕೋಣೆಯನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

2013-14ನೇ ಸಾಲಿನ ಅಕ್ಷರ ದಾಸೋಹ ಅನುದಾನದಡಿ ರೂ. 3.91 ಲಕ್ಷ ವೆಚ್ಚದಲ್ಲಿ ಈ ಅಡುಗೆ ಕೋಣೆಯನ್ನು ನಿರ್ಮಿಸಲಾಗಿತ್ತು. ಈ ಸಂದರ್ಭ ಸರಕಾರಿ ಪದವಿಪೂರ್ವ ಕಾಲೇಜು ಪ್ರಭಾರ ಪ್ರಾಂಶುಪಾಲ ಹೆಚ್.ಕೆ. ಉಮೇಶ್, ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕ ಎಂ.ಎಂ. ಯಶ್ವಂತ್ ಕುಮಾರ್, ಸಹ ಶಿಕ್ಷಕರು ಪಾಲ್ಗೊಂಡಿದ್ದರು.