ಮಡಿಕೇರಿ, ಫೆ. 13: ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸದೆ ಇರುವುದರಿಂದಲೇ ಈ ರೀತಿಯ ತೀರ್ಪು ಹೊರ ಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಆರೋಪಿಸಿದ್ದು, ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ತಾ. 16 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.