ಶ್ರೀಮಂಗಲ, ಫೆ. 13: ಟಿ.ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಮಚ್ಚಮಾಡ ಸುಮಂತ್ ಅವರು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಡಿಕೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ವೀರಾಜಪೇಟೆ ತಾಲೂಕು ಬಿಜೆಪಿಯ ಉಪಾಧ್ಯಕ್ಷರಾಗಿರುವ ಸುಮಂತ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯವಾಗಿರುವ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ.

ವೈಯಕ್ತಿಕ ಕಾರಣದಿಂದ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ತಾನು ರಾಜೀನಾಮೆ ನೀಡಿದ್ದು, ಯಾವುದೇ ಕಾರಣಕ್ಕೂ ಪಕ್ಷದ ಮೇಲೆ ನೋವಿನ ಭಾವನೆ ಇಲ್ಲ. ಪಕ್ಷವನ್ನು ತೊರೆಯುವುದಿಲ್ಲ. ಮುಂದಿನ ದಿನಗಳಲ್ಲಿಯೂ ಸಾರ್ವಜನಿಕ ಸೇವೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.