ಕೂಡಿಗೆ, ಫೆ. 13: ಹುದುಗೂರು ಶ್ರೀ ಕಾಳಿಕಾಂಬ ಯುವಕ ಸಂಘದ ವತಿಯಿಂದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಉತ್ಸವವು ತಾ. 15 ರಂದು ಹುದುಗೂರಿನ ಸಂಘದ ಆವರಣದಲ್ಲಿ ನಡೆಯಲಿದೆ. ಪುರುಷರಿಗೆ ಕಬಡ್ಡಿ ಪಂದ್ಯಾವಳಿ, ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾವಳಿ ನಡೆಯಲಿದೆ. ತಾ. 16 ರಂದು ಪುರುಷರ ವಾಲಿಬಾಲ್ ಪಂದ್ಯಾವಳಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ.