ಕುಶಾಲನಗರ, ಫೆ. 13: ಮಳೆಗಾಲದ ಅವಧಿಯಲ್ಲಿ ಕಾವೇರಿ ನದಿ ಪ್ರವಾಹದಿಂದ ಬಡಾವಣೆಗಳ ಮನೆಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ನದಿಯ ಹೂಳನ್ನು ಎತ್ತಲು ಸದ್ಯದಲ್ಲಿಯೇ ಕೆಲಸ ಪ್ರಾರಂಭಿಸಲಾಗುವುದು ಎಂದು ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭರವಸೆ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ ನದಿ ಪ್ರವಾಹ ಸಂತ್ರಸ್ತರ ರಕ್ಷಣಾ ವೇದಿಕೆ ಪ್ರಮುಖರೊಂದಿಗೆ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಸೇತುವೆ ಕೆಳಭಾಗದ ನದಿ ಪ್ರದೇಶಕ್ಕೆ ಭೇಟಿ ನೀಡಿ ನಂತರ ಅವರು ಮಾತನಾಡಿದರು.
ಈ ಸಂದರ್ಭ ಪ.ಪಂ. ಮುಖ್ಯಾಧಿಕಾರಿ ಸುಜಯ್ಕುಮಾರ್, ಸದಸ್ಯರಾದ ಜಯವರ್ಧನ್, ಅಮೃತ್ರಾಜ್, ಶೇಖ್ ಖಲೀಮುಲ್ಲಾ, ಕೆ.ಜಿ. ಮನು, ಎಂ.ಡಿ. ಕೃಷ್ಣಪ್ಪ, ವೈಶಾಖ್, ನದಿ ಪ್ರವಾಹ ಸಂತ್ರಸ್ತರ ರಕ್ಷಣಾ ವೇದಿಕೆ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ಎಂ.ಎಂ. ಚರಣ್, ತೋರೇರ ಉದಯಕುಮಾರ್, ಕೊಡಗನ ಹರ್ಷ ಮತ್ತಿತರರು ಇದ್ದರು.