ಶ್ರೀಮಂಗಲ, ಫೆ. 13: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹುದಿಕೇರಿಯ ಮಿದೇರಿರ ನವೀನ್ ಅವರನ್ನು ಪಕ್ಷ ನೇಮಿಸಿದ ಬೆನ್ನಲ್ಲೆ; ಪೊನ್ನಂಪೇಟೆ ಬ್ಲಾಕ್ ವ್ಯಾಪ್ತಿಯ ವಲಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಚುರುಕುಗೊಂಡಿದೆ.

ಶ್ರೀಮಂಗಲ ಕಾಂಗ್ರೆಸ್‍ನ ವಲಯ ಅಧ್ಯಕ್ಷರಾಗಿ ತಾ.ಪಂ. ಸದಸ್ಯ ಪೊಯಿಲೇಂಗಡ ಪಲ್ವೀನ್ ಪೂಣಚ್ಚ ಮತ್ತು ಟಿ. ಶೆಟ್ಟಿಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಮುಕ್ಕಾಟಿರ ಸಂದೀಪ್, ಕುಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್.ವೈ. ರಾಮಕೃಷ್ಣ ಅವರನ್ನು ಆಯ್ಕೆ ಮಾಡಲಾಯಿತು. ಅಲ್ಲದೆ, ಕುಟ್ಟ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಅಧ್ಯಕ್ಷರಾಗಿ ಮಾಜಿ ಜಿ.ಪಂ. ಸದಸ್ಯ ಕೆ.ಎಂ. ಬಾಲಕೃಷ್ಣ ಅವರನ್ನು ಆಯ್ಕೆಮಾಡಲಾಯಿತು.

ಶ್ರೀಮಂಗಲ ಪ್ರವಾಸಿ ಮಂದಿರದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಲಿನ ಸ್ಥಾನಗಳಿಗೆ ಒಮ್ಮತದ ಅಭ್ಯರ್ಥಿ ಘೋಷಿಸಲಾಯಿತು.

ಈ ಸಂದರ್ಭ ಜಿ.ಪಂ. ಸದಸ್ಯ ಮುಕ್ಕಾಟೀರ ಶಿವು ಮಾದಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ನಿಕಟಪೂರ್ವ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವಲಯ ಕಾಂಗ್ರೆಸ್‍ನ ನಿಕಟಪೂರ್ವ ಅಧ್ಯಕ್ಷರುಗಳಾದ ಚೊಟ್ಟೆಯಂಡಮಾಡ ವಿಶು, ಕುಂಞಂಗಡ ಬೋಸ್ ಮಾದಪ್ಪ, ಟಿ. ಶೆಟ್ಟಿಗೇರಿ ಗ್ರಾ.ಪಂ. ಸದಸ್ಯ ಚೊಟ್ಟೆಯಂಡಮಾಡ ಉದಯ, ಟಿ. ಶೆಟ್ಟಿಗೇರಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪೆಮ್ಮಂಡ ರಾಜ್ ಕುಶಾಲಪ್ಪ, ಅಪ್ಪಚ್ಚಂಗಡ ಮೋಟಯ್ಯ, ಮಚ್ಚಮಾಡ ಸಜು, ಚಟ್ಟಂಗಡ ಸುನಿಲ್, ಮಾಣೀರ ಪ್ರವಿ, ಟಿ. ಶೆಟ್ಟಿಗೇರಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಮಾಣೀರ ಮಂಜುಸೋಮಯ್ಯ ಮತ್ತಿತರರು ಹಾಜರಿದ್ದರು.