ಕೂಡಿಗೆ, ಫೆ. 12: ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಸಭೆಯು ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆಯಿತು. ಪೊಲೀಸ್ ಇನ್ಸ್‍ಪೆಕ್ಟರ್ ಮಹೇಶ್ ಅವರು ಮಾತನಾಡಿ, ಯಾವುದೇ ಸರ್ಕಾರಿ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷ್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ, ಕೊಡಗು ಜಿಲ್ಲೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಅಥವಾ ಮೈಸೂರು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧೀಕ್ಷಕರಿಗೆ ಲಿಖಿತ ಅಥವಾ ಮೌಖಿಕ ದೂರು ನೀಡಬಹುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾಮ ಪಂಚಾಯ್ತಿ ಸದಸ್ಯರಾದ ಕೆ.ವೈ. ರವಿ, ರಾಮಚಂದ್ರ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಶ್ವಿನಿ, ಕಾರ್ಯದರ್ಶಿ ಶಿಲ್ಪ, ಗ್ರಾಮಸ್ಥರು ಸೇರಿದಂತೆ ಮತ್ತಿತರರು ಇದ್ದರು.