ಕೂಡಿಗೆ, ಫೆ. 13: ಶ್ರೀ ಉಮಾಮಹೇಶ್ವರ ಕ್ಷೇತ್ರ ಸಮಿತಿ ಹುದುಗೂರು ಇವರ ವತಿಯಿಂದ ಮಹಾಶಿವರಾತ್ರಿಯ ಅಂಗವಾಗಿ ಶ್ರೀ ಉಮಾಮಹೇಶ್ವರ ಕ್ಷೇತ್ರದ ಆವರಣದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಅಂದು ಬೆಳಗ್ಗೆ 8.30 ಗಂಟೆಯಿಂದ 1 ಗಂಟೆವರೆಗೆ ಶ್ರೀ ಮಹಾಗಣಪತಿ ಹೋಮ, ಮಹಾಮೃತ್ಯುಂಜಯ ಹೋಮ, ರುದ್ರ ಹೋಮ, ರುದ್ರಾಭಿಷೇಕ ಸೇರಿದಂತೆ ವಿಶೇಷ ಪೂಜಾಕಾರ್ಯಕ್ರಮಗಳು ನಡೆಯಲಿವೆ. ಸಂಜೆ 4.30 ಗಂಟೆಗೆ ಶ್ರೀ ಉಮಾಮಹೇಶ್ವರ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ, ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದೆ.