ಮಡಿಕೇರಿ, ಫೆ. 13: ವೈಲ್ಡ್ ಲೈಫ್ ಫಸ್ಟ್ ಮತ್ತು ಮಡಿಕೇರಿ ಸಂತ ಮೈಕಲರ ಪ್ರೌಢಶಾಲೆ ಆಶ್ರಯದಲ್ಲಿ ಕಾಡ್ಗಿಚ್ಚು ಜಾಗೃತಿ ಜಾಥಾ ತಾ.14 ರಂದು (ಇಂದು) ಬೆ.10.15ಕ್ಕೆ ಆರಂಭಗೊಳ್ಳಲಿದ್ದು, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ.ಸುಮನ್ ಡಿ ಪೆನ್ನೇಕರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ವೈಲ್ಡ್ ಲೈಫ್ ಫಸ್ಟ್ ಅಧ್ಯಕ್ಷ ಕೆ.ಎಂ.ಚಿಣ್ಣಪ್ಪ, ಪರಿಸರ ಪ್ರೇಮಿ ತಮ್ಮು ಪೂವಯ್ಯ, ಕಾರ್ಯಕ್ರಮ ಸಂಚಾಲಕ ಟಿ.ಎಲ್.ಶ್ರೀನಿವಾಸ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.