ಮಡಿಕೇರಿ, ಫೆ.13: ಪ್ರಸಕ್ತ(2019-20) ಸಾಲಿನಲ್ಲಿ ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದಲ್ಲಿ ಬಾಲವೇದಿಕೆ ಕಾರ್ಯಕ್ರಮದಲ್ಲಿ 5 ರಿಂದ 16 ವರ್ಷದ ಮಕ್ಕಳಿಗೆ ಸಾಂಸ್ಕøತಿಕ ಕಾರ್ಯಕ್ರಮವು ತಾ. 15 ರಿಂದ ಮಾರ್ಚ್, 28 ರವರೆಗೆ ಸಂಜೆ 5.30 ಗಂಟೆಗೆ ಪ್ರತಿ 7 ಶನಿವಾರಗಳು, ರಾಜಾಸೀಟು ಉದ್ಯಾನವನ ಆವರಣದಲ್ಲಿ ನಡೆಯಲಿದೆ.
ಬಾಲವೇದಿಕೆ ಕಾರ್ಯಕ್ರಮದಲ್ಲಿ ಮಕ್ಕಳಿಂದ 50 ಸೋಲೋ ನೃತ್ಯ ಹಾಗೂ 25 ಸಂಸ್ಥೆಗಳಿಂದ ಸಮೂಹ ನೃತ್ಯ ಪ್ರದರ್ಶನವಿರುತ್ತದೆ ಹಾಗೂ ಪ್ರದರ್ಶನ ನೀಡಿದ ಮಕ್ಕಳಿಗೆ ಪ್ರೋತ್ಸಾಹ ಧನ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುವುದು.
ನೃತ್ಯ ಪ್ರದರ್ಶನದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ಹಾಗೂ ಸಂಸ್ಥೆಗಳು ತಮ್ಮ ಹೆಸರನ್ನು ತಾ. 18 ರೊಳಗೆ ಮೊಬೈಲ್ ಸಂಖ್ಯೆ 8618861505, 6363285685 ನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿ ಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿ ಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.