ಕೂಡಿಗೆ, ಫೆ. 13: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿರುವ ಅಂಗನವಾಡಿ ಕಟ್ಟಡಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.

ಈ ಸಾಲಿನ ಪ್ರಕೃತಿ ವಿಕೋಪದ ಅನುದಾನದಲ್ಲಿ ರೂ. 10 ಲಕ್ಷ ವೆಚ್ಚದಲ್ಲಿ ಗ್ರಾಮಸ್ಥರ ಬೇಡಿಕೆಯ ಮೇರೆಗೆ ನೂತನ ಅಂಗನವಾಡಿ ಕಟ್ಟಡ ನಿರ್ಮಾಣವಾಗಲಿದೆ. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯರಾದ ಹೆಚ್.ಆರ್. ಶ್ರೀನಿವಾಸ್, ಕೆ.ಆರ್. ಮಂಜುಳಾ, ತಾಲೂಕು ಬಿಜೆಪಿ ಅಧ್ಯಕ್ಷ ಮನು ರೈ, ಕೂಡಿಗೆ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲಾ, ಉಪಾಧ್ಯಕ್ಷ ಗಿರೀಶ್ ಕುಮಾರ್, ಸದಸ್ಯರಾದ ರಾಮಚಂದ್ರ, ಕೆ.ವೈ. ರವಿ, ಮೋಹಿನಿ, ಜಯಶ್ರಿ, ಚಂದ್ರಿಕಾ, ಪುಷ್ಪ, ಮಂಜಯ್ಯ, ವಿಶ್ವನಾಥ್, ಜಿ.ಪಂ.ನ ಕಾರ್ಯಪಾಲಕ ಅಭಿಯಂತರ ವೀರೇಂದ್ರ, ಸಹಾಯಕ ಅಭಿಯಂತರ ಕೀರ್ತನ್ ಕುಮಾರ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಶ್ವಿನಿ ಮತ್ತಿತರರು ಇದ್ದರು.