ಗುಡ್ಡೆಹೊಸೂರು, ಫೆ. 14 ಇಲ್ಲಿಗೆ ಸಮೀಪದ ಅತ್ತೂರು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ತಾ. 20, 21 ಮತ್ತು 22 ರಂದು ವಿವಿಧ ಪೂಜಾ ಕಾರ್ಯಗಳು ನಡೆಯಲಿದೆ.
ತಾ. 20 ರಂದು ಸಾಯಂಕಾಲ 7 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ದೇವರಿಗೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ತಾ. 21 ರಂದು ಬೆಳಿಗ್ಗೆ ಕಲಶಾಭಿಷೇಕ ಶ್ರೀ ದೇವರಿಗೆ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ದೇವರ ಬಲಿ, ಪ್ರಸಾದ ವಿತರಣೆ ನಡೆಯಲಿದೆ. ನಂತರ ವಿವಿಧ ಪೂಜಾ ಕಾರ್ಯಗಳು ನಡೆಯಲಿವೆ. ಶಿವರಾತ್ರಿಯ ಸಂದರ್ಭ ವಿವಿಧ ಮನರಂಜನಾ ಕಾರ್ಯಕ್ರಮ ನಡೆಯಲಿವೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಉಗ್ರಾಣಿ ಮನೋಜ್ ತಿಳಿಸಿದ್ದಾರೆ. ಸದ್ರಿ ದಿನಗಳಲ್ಲಿ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಕಾರ್ಯ ನಡೆಯಲಿದೆ.