*ಗೋಣಿಕೊಪ್ಪಲು, ಫೆ. 14 : ಕುಶಾಲನಗರದ ಕಾವೇರಿ ಹೊಳೆಯಲ್ಲಿ ಮುಳುಗಿ ಮೃತಪಟ್ಟಿದ್ದ ಎಂ.ಎಸ್.ಗಗನ್, ಶಶಾಂಕ್,ಅಕಾಶ್ ಎಂಬ ವಿದ್ಯಾರ್ಥಿಗಳಿಗೆ ಮುಖ್ಯ ಮಂತ್ರಿಯವರ ಪರಿಹಾರ ನಿಧಿಯಿಂದ ತಲಾ 2 ಲಕ್ಷದಂತೆ ಒಟ್ಟು ರೂ 6 ಲಕ್ಷ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿಯವರ ಜಂಟಿ ಕಾರ್ಯದರ್ಶಿ ಪಿ.ಎ.ಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.
2019ರ ಜೂನ್ 5ರಂದು ಮೂವರು ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದರು. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದವರಾಗಿದ್ದು; ಸರ್ಕಾದಿಂದ ಪರಿಹಾರ ಧನ ನೀಡಲು ಶಾಸಕ ಕೆ.ಜಿ.ಬೋಪಯ್ಯ ಮುಖ್ಯ ಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತ ಕಾರ್ಯದರ್ಶಿಯವರ ಮೂಲಕ ಪರಿಹಾರ ಧನದ ಚೆಕ್ ನೀಡಿದ್ದಾರೆ.