*ಗೋಣಿಕೊಪ್ಪಲು, ಫೆ. 14: ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಅಂಗನವಾಡಿ ಕೇಂದ್ರದಲ್ಲಿ ಪೆÇೀಷಣಾ ಅಭಿಯಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ತಿತಿಮತಿ ಗ್ರಾ.ಪಂ. ಸದಸ್ಯ ಎನ್.ಎನ್. ಅನೂಪ್ ಉದ್ಘಾಟಿಸಿದರು. ನಂತರ ಮಕ್ಕಳಿಗೆ ಅಕ್ಷರ ಅಭ್ಯಾಸ, ಗರ್ಭಿಣಿಯರಿಗೆ ಸೀಮಂತ, ಬಾಣಂತಿಯರಿಗೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ತಿಳಿಸಿದರು.
ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶಿವಯ್ಯ, ಆರೋಗ್ಯ ಸಹಾಯಕಿ ಗೀತಾ, ಅಂಗನವಾಡಿ ಕಾರ್ಯಕರ್ತೆಯರಾದ ಸತ್ಯಬಾಮ, ವಿಧ್ಯಾ, ಮೀನಾಕುಮಾರ್, ಬೋಜಿ, ಅಂಗನವಾಡಿ ಸಹಾಯಕರಾದ ವನಿತಾ, ಆಶಾ ಕಾರ್ಯಕರ್ತೆಯರಾದ ಪಂಕಜ, ಶೋಭ, ರೋಜಾ ಸೇರಿದಂತೆ ಗರ್ಭಿಣಿ ಬಾಣಂತಿಯರು ಮತ್ತು ಮಕ್ಕಳು ಹಾಜರಿದ್ದರು.