ಸೋಮವಾರಪೇಟೆ, ಫೆ. 14: ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಇಲ್ಲಿನ ಎಸ್‍ಜೆಎಂ ಶಾಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯ ಬಗ್ಗೆ ಅರಿವು ಕಾರ್ಯಾಗಾರ ನಡೆಯಿತು.
ಸೋಮವಾರಪೇಟೆ ಪೊಲೀಸ್ ಠಾಣೆಯ ಎಎಸ್‍ಐ ಸುಂದರ್ ಸುವರ್ಣ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪೋಕ್ಸೋ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಕ್ಕಳ ಸಹಾಯವಾಣಿ ಕೇಂದ್ರದ ಬಿ.ಕೆ. ಕುಮಾರಿ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣೆ ಮತ್ತು ಪೋಷಣೆಯ ಬಗ್ಗೆ ಅರಿವು ಮೂಡಿಸಿದರು. ಶಾಲಾ ಮುಖ್ಯ ಶಿಕ್ಷಕ ರುದ್ರೇಶ್ ಅವರು ಉಚಿತ ಮತ್ತು ಕಡ್ಡಾಯ ಶಿಕ್ಷಣ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಬಿ.ಕೆ. ಬಸವನಗೌಡ ಅವರು ಬಾಲ ಕಾರ್ಮಿಕ ನಿಯಂತ್ರಣ ಕಾಯ್ದೆ ಬಗ್ಗೆ ಮಾಹಿತಿ ಒದಗಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿಯ ಯೋಗೇಶ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.