ಚೆಟ್ಟಳ್ಳಿ, ಫೆ. 14: ಸಿ.ಎ.ಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ಕಾಯ್ದೆಯನ್ನು ವಿರೋಧಿಸಿ ಕೊಡಗು ಮುಸ್ಲಿಂ ಜಮಾಅತ್ ಒಕ್ಕೂಟದ ವತಿಯಿಂದ ಮಾನವ ಸರಪಳಿ ನಿರ್ಮಿಸಿ ಕುಶಾಲನಗರದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಯಿತು.

ಕೊಡಗು ಮುಸ್ಲಿಂ ಜಮಾಅತ್ ಒಕ್ಕೂಟದ ಕಾರ್ಯಕರ್ತರು ರಸ್ತೆಯ ಎರಡೂ ಬದಿಯಲ್ಲಿ ಜಾಮಿಯಾ ಮಸೀದಿಯಿಂದ ಹಿಲಾಲ್ ಮಸೀದಿಯ ತನಕ ಮಾನವ ಸರಪಳಿ ನಿರ್ಮಿಸಿ ಸಿ.ಎ.ಎ ಹಾಗೂ ಎನ್.ಆರ್.ಸಿ ವಿರುದ್ಧ ಸಂದೇಶ ಸಾರಿದರು.

ರಾಷ್ಟ್ರಗೀತೆ ಹಾಡಿದ ಕಾರ್ಯಕರ್ತರು, ಸಾಂಕೇತಿಕವಾಗಿ ಸಿ.ಎ.ಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರುದ್ಧ ಸಂದೇಶ ಸಾರಿದರು.

ಈ ಸಂದರ್ಭ ಮಾತನಾಡಿದ ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಫ್ಝರ್ ಕೊಡ್ಲಿಪೇಟೆ, ಇಂದು ಕೇಂದ್ರ ಸರ್ಕಾರ ಜನವಿರೋಧಿ ಕಾಯ್ದೆಗಳನ್ನು ಅನಿಷ್ಠಾನಗೊಳಿಸುವ ಮೂಲಕ ಸರ್ವಾಧಿಕಾರವನ್ನು ತೋರುತ್ತಿದೆ. ಬಿಜೆಪಿ ಪಕ್ಷದ ದುರಾಡಳಿತಕ್ಕೆ ದೆಹಲಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಜನರಿಗೆ ಅವಶ್ಯಕತೆಯಿಲ್ಲದ ಹೊಸ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಕಾಯ್ದೆ ಹಿಂಪಡೆಯುವ ತನಕವೂ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಜಾಮಿಯಾ ಮಸೀದಿ ಕಾರ್ಯದರ್ಶಿ ತನ್ವೀರ್ ಅಹಮದ್ ಮಾತನಾಡಿ, ಎನ್.ಆರ್.ಸಿ ಹಾಗೂ ಸಿ.ಎ.ಎ ಕಾಯ್ದೆಯನ್ನು ವಿರೋಧಿಸಿ ಕೊಡಗಿನ ಎಲ್ಲಾ ಜಮಾಅತ್‍ಗಳಲ್ಲೂ ಶಾಂತಿಯುತವಾಗಿ ಮಾನವ ಸರಪಳಿ ನಿರ್ಮಿಸಿ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿದ್ದೇವೆ. ಕೇಂದ್ರ ಸರ್ಕಾರ ಕೂಡಲೇ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದರು.

ಕುಶಾಲನಗರ ವೃತ ನಿರೀಕ್ಷಕ ಮಹೇಶ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿತ್ತು.

ಸುಂಟಿಕೊಪ್ಪ : ಸಿಎಎ,ಎನ್‍ಆರ್‍ಸಿ,ಎನ್‍ಪಿಆರ್ ವಿರೋಧಿಸಿ ಸಂಯುಕ್ತ ಮುಸ್ಲಿಂ ಜಮಾಯತ್‍ನ ವತಿಯಿಂದ ಮೌಲವಿ ಹಾಗೂ ಮುಸ್ಲಿಂ ಭಾಂದವರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರಕಾರವು ದೇಶದಲ್ಲಿ ಜಾರಿಗೆ ತರಲು ಹೊರಟಿರುವ ಸಿಎಎ, ಎನ್‍ಆರ್‍ಸಿ,ಎನ್‍ಪಿಆರ್ ವಿರೋಧಿಸಿ ಮಧ್ಯಾಹ್ನ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಸಿಎಎ, ಎನ್‍ಆರ್‍ಸಿ, ಎನ್‍ಪಿಆರ್ ವಿರೋಧಿಸಿ ಘೋಷಣೆ ಗಳನ್ನು ಕೂಗಿದರು. ಮಸೀದಿಯ ಮೌಲವಿಗಳು, ನೂರಾರು ಸಂಖ್ಯೆಯಲ್ಲಿ ಮುಸ್ಲಿಮರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾಪೆÇೀಕ್ಲು : ನಾಪೆÇೀಕ್ಲು ಪಟ್ಟಣದಲ್ಲಿ ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಖಾಯ್ದೆ ವಿರೋಧಿಸಿ ಕೊಡಗು ಮುಸ್ಲಿಂ ಜಮಾಅತ್ ಒಕ್ಕೂಟದ ವತಿಯಿಂದ ನಾಪೆÇೀಕ್ಲು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು.

ನಾಪೆÇೀಕ್ಲು ಪಟ್ಟಣ ಜುಮ್ಮಾ ಮಸೀದಿಯಿಂದ ಮೆರವಣಿಗೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು ಸಿಎಎ ಮತ್ತು ಎನ್‍ಆರ್‍ಸಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.

ನಂತರ ಮಾತನಾಡಿದ ನಾಲ್ಕುನಾಡು ಮುಸ್ಲಿಂ ಜಮಾಅತ್ ಒಕ್ಕೂಟದ ಅಧ್ಯಕ್ಷ ಪಿ.ಎಂ.ಖಾಸಿಂ, ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಎಂ.ಸಯ್ಯದ್, ಪಟ್ಟಣ ಜಮಾಅತ್ ಅಧ್ಯಕ್ಷ ಪಿ.ಎಂ.ಸಲೀಂ ಹ್ಯಾರೀಸ್, ಕಾರ್ಯದರ್ಶಿ ಟಿ.ಹೆಚ್.ಅಹಮ್ಮದ್, ಸಹಕಾರ್ಯದರ್ಶಿ ಟಿ.ಎ.ಮಹಮ್ಮದ್ ಅನೀಫ್, ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರಶೀದ್, ಬದ್ರುದ್ದೀನ್ ಕಿಂಗ್ಸ್‍ವೇ, ಸೇರಿದಂತೆ ಎಲ್ಲಾ ಮುಖಂಡರು ಹಾಜರಿದ್ದರು.

ಸಿದ್ದಾಪುರ: ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಸಿದ್ದಾಪುರ ಘಟಕದಿಂದ ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಪ್ರಮುಖರಾದ ಕೆ.ಸಿ. ಬಶೀರ್, ಸೌಖತ್ ಆಲಿ, ನವೀದ್ ಖಾನ್, ವಾಜಿದ್, ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.