ಮಡಿಕೇರಿ, ಫೆ. 16: ಕರ್ನಾಟಕ ಲೋಕ ಸೇವಾ ಆಯೋಗ ವತಿಯಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 998 ಸಹಾಯಕ/ಪ್ರಥಮ ದರ್ಜೆ ಸಹಾಯಕರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ 6-3-2020ಕ್ಕೆ ಅನ್ವಯವಾಗುವಂತೆ ಕನಿಷ್ಟ 18 ರಿಂದ ಗರಿಷ್ಠ 35 ವರ್ಷಗಳು ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳು ಹಾಗೂ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 43 ವರ್ಷಗಳು ಆಗಿವೆ. ಅರ್ಜಿ ಸಲ್ಲಿಸಲು ಮಾರ್ಚ್ 6 ಕೊನೆಯ ದಿನವಾಗಿದೆ. ಶುಲ್ಕವನ್ನು ಪಾವತಿಸಲು ಮಾರ್ಚ್ 7 ಅಂತಿಮ ದಿನವಾಗಿರುತ್ತದೆ. ಯಾವುದೇ ಕಾಮನ್ ಸರ್ವೀಸ್ ಸೆಂಟರ್‍ಗಳಲ್ಲಿ ಅಥವಾ ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600, ಪ್ರವರ್ಗ-2ಎ, 2ಬಿ, 3ಎ, 3ಬಿ.ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300. ಮಾಜಿ ಸೈನಿಕರಿಗೆ ರೂ. 50, ಪ.ಜಾ., ಪ.ಪಂ., ಅಂಗವಿಕಲರು ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ hಣಣಠಿ://ಞಠಿsಛಿ.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ್ ತಿಳಿಸಿದ್ದಾರೆ.