ಮಡಿಕೇರಿ, ಫೆ. 16: ಮಡಿಕೇರಿ ನಗರಸಭೆ ವ್ಯಾಪ್ತಿಗೆ ಕುಂಡಾಮೇಸ್ತ್ರಿಯಿಂದ ಕೂಟುಹೊಳೆಯವರಿಗೆ ಮತ್ತು ಕೂಟುಹೊಳೆಯಿಂದ ಮಡಿಕೇರಿ ನಗರಸಭಾ ವ್ಯಾಪ್ತಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಸರಿಯಷ್ಟೆ. ಆದರೆ ಬೇಸಿಗೆ 2020ರ ಹಿನ್ನೆಲೆಯಲ್ಲಿ ಸಾರ್ವಜನಿಕರು ಶುದ್ಧ ಕುಡಿಯುವ ನೀರನ್ನು ಅವಶ್ಯಕತೆಗೆ ಅನುಗುಣವಾಗಿ ಬಳಸಲು ಕೋರಿದೆ. ಕುಡಿಯುವ ನೀರನ್ನು ಇತರ ಬಳಕೆ ಅಂದರೆ ವಾಹನಗಳನ್ನು ತೊಳೆಯಲು, ತೋಟದ ಗಿಡಕ್ಕೆ, ಅನಾವಶ್ಯಕ ಕೆಲಸಗಳಿಗೆ ಬಳಸಿರುವುದು ಕಂಡು ಬಂದಲ್ಲಿ ಕೂಡಲೇ ದಂಡ ವಿಧಿಸಿ ನಲ್ಲಿ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಎಂ.ಎಲ್. ರಮೇಶ್ ತಿಳಿಸಿದ್ದಾರೆ.