ಸಿದ್ದಾಪುರ, ಫೆ. 15: ಸಿದ್ದಾಪುರ ಹಾಗೂ ನೆಲ್ಯಹುದಿಕೇರಿಯ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ನೂತನ ಕಚೇರಿ ಸಿದ್ದಾಪುರ ಆಟೋ ಚಾಲಕರ ಮಾಲೀಕರ ಸಂಘದ ಅಧ್ಯಕ್ಷ ಎಂ.ಆರ್. ಸಲೀಂ ನೇತೃತ್ವದಲ್ಲಿ ಪ್ರಾರಂಭವಾಗಿದೆ. ನೂತನ ಕಚೇರಿಯನ್ನು ಸಿದ್ದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಹೆಚ್.ಎಸ್. ಬೋಜಪ್ಪ ಉದ್ಘಾಟಿಸಿ ದರು. ಆಟೋ ಚಾಲಕರಿಗೆ ಗುರುತಿನ ಚೀಟಿಯನ್ನು ಮಡಿಕೇರಿ ನಗರದ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಎ.ಆರ್. ಕುಟ್ಟಪ್ಪ, ಎಸ್.ಎನ್.ಡಿ.ಪಿ. ಜಿಲ್ಲಾ ಯೂನಿ ಯನ್ ಅಧ್ಯಕ್ಷ ವಿ.ಕೆ ಲೋಕೇಶ್, ಸಿದ್ದಾಪುರ ಆಟೋ ಚಾಲಕರ ಮಾಲೀಕರ ಸಂಘದ ಕಾನೂನು ಸಲಹೆಗಾರ ಕೆ.ವಿ. ಸುನಿಲ್ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಎ.ಎನ್. ವಾಸು, ಉದ್ಯಮಿ ರಾಜೇಂದ್ರ ಸಿಂಗ್, ರವಿಶಂಕರ್, ಲಯನ್ಸ್ ಕ್ಲಬ್ ಅಧ್ಯಕ್ಷ ಕೀತಿಯಂಡ ವಿವೇಕ್ ಜೋಯಪ್ಪ, ಇತರರು ಹಾಜರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಗಿರೀಶ್ ಸ್ವಾಗತಿಸಿದರು. ಶಶಿಕುಮಾರ್ ಕಾರ್ಯಕ್ರಮ ನಿರೂಪಿಸಿ ವಿಜು ವಂದಿಸಿದರು. ಇದೇ ಸಂದರ್ಭದಲ್ಲಿ ಸಿದ್ದಾಪುರದ ವೈದ್ಯಾಧಿಕಾರಿ ಡಾ. ರಾಘವೇಂದ್ರ, ಸಿ.ಐ. ಅನೂಪ್ ಮಾದಪ್ಪ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.