ಸೋಮವಾರಪೇಟೆ, ಫೆ. 16: ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ವಕೀಲರ ಸಂಘದ ಆಶ್ರಯದಲ್ಲಿ ತಾ. 17ರಂದು (ಇಂದು) ಪಟ್ಟಣದ ವೆಂಕಟೇಶ್ವರ ಬ್ಲಾಕ್‍ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 9.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಇಲ್ಲಿನ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಆರ್. ದಿಂಡಲಕೊಪ್ಪ ಅವರು ಉದ್ಘಾಟಿಸಲಿದ್ದು, ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ, ತಹಶೀಲ್ದಾರ್ ಗೋವಿಂದರಾಜು, ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ಮಹದೇವಸ್ವಾಮಿ, ಪ.ಪಂ. ಮುಖ್ಯಾಧಿಕಾರಿ ರಮೇಶ್, ವೃತ್ತ ನಿರೀಕ್ಷಕ ನಂಜುಂಡೇಗೌಡ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಟಿ.ಜೆ. ಗಣೇಶ್‍ಕುಮಾರ್ ತಿಳಿಸಿದ್ದಾರೆ.