ಮಡಿಕೇರಿ, ಫೆ. 16: ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸದೆ ಇರುವುದರಿಂದಲೇ ಈ ರೀತಿಯ ತೀರ್ಪು ಹೊರ ಬಂದಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಮಿಟ್ಟು ಚಂಗಪ್ಪ, ಟಿ.ಪಿ. ರಮೇಶ್, ಕೆ.ಕೆ. ಮಂಜುನಾಥ್ ಕುಮಾರ್, ಪದಾಧಿಕಾರಿಗಳಾದ ಅಪ್ರುರವೀಂದ್ರ, ಅಬ್ದುಲ್ ರಜಾಕ್, ಸದಾ ಮುದ್ದಪ್ಪ, ನಂದಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.