ಕೂಡಿಗೆ, ಫೆ. 15: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಹಾಗೂ ಅರ್ಜಿಗಳನ್ನು ನೀಡುವ ಬಗ್ಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿಜಾಯ್ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಯು ಶಿರಂಗಾಲದ ನಾಮಧಾರಿ ಸಮುದಾಯ ಭವನದಲ್ಲಿ ನಡೆದು ಜನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಹಳ್ಳಿಗಳ ಕಡೆಗೆ ಅಧಿಕಾರಿಗಳ ನಡಿಗೆ ಎಂಬ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿ ಗಳೊಂದಿಗೆ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಶಿರಂಗಾಲವು ಸಂಪೂರ್ಣ ವಾಗಿ ಕಂದಾಯ ಗ್ರಾಮವಾಗದಿರುವ ಬಗ್ಗೆ ಹಾಗೂ ಪೌತಿ ಖಾತೆ ಮತ್ತು ಇತರೆ ಖಾತೆ ವರ್ಗಾವಣೆಯ ಬಗ್ಗೆ 50ಕ್ಕೂ ಹೆಚ್ಚು ಗ್ರಾಮಸ್ಥರು ಅರ್ಜಿ ಸಲ್ಲಿಸಿದರು. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಪೌತಿ ಮತ್ತು ಇತರೆ ಖಾತೆಯ ಬಗ್ಗೆ ಮಾಹಿತಿ ಪಡೆದು ಸಮರ್ಪಕವಾಗಿ ಸಮಗ್ರ ಮಾಹಿತಿ ಯೊಂದಿಗೆ ಆಯಾ ವರ್ಗದ ರೈತರಿಗೆ ಹಾಗೂ ಗ್ರಾಮಸ್ಥರಿಗೆ ಖಾತೆಯ ವರ್ಗಾವಣೆ ಮಾಡುವಂತೆ ಸೂಚಿಸಿದರು. ಅಲ್ಲದೆ, ಮಾಹಿತಿಯ ಕೊರತೆ ಇದ್ದಲ್ಲಿ ಅಧಿಕಾರಿಗಳು ಅರ್ಜಿಗೆ ಸಮರ್ಪಕ ವಾಗಿ ಹಿಂಬ ರಹವನ್ನು ಬರೆದು ದಾಖಲಾತಿಗಳನ್ನು ಒದಗಿಸಲು ಅರ್ಜಿದಾರರಿಗೆ ಸೂಚಿಸಬೇಕು. ಅಲ್ಲದೆ, ಅದರನು ಗುಣವಾಗಿ ಖಾತೆಗಳನ್ನು ಮಾಡಿ ಕೊಡುವುದರಲ್ಲಿ ಪ್ರಾಮಾಣಿ ಕವಾಗಿ ಕಾರ್ಯನಿರ್ವ ಹಿಸುವಂತೆ ಸೂಚಿಸಿದರು. (ಮೊದಲ ಪುಟದಿಂದ) ನಂತರ ನೀರಾವರಿ ಇಲಾಖೆಗೆ ಸಂಬಂಧಪಟ್ಟಂತೆ ಹಾರಂಗಿ ಅಚ್ಚುಕಟ್ಟು ಪ್ರದೇಶದಿಂದ ಕೊಡಗಿನ ಗಡಿಭಾಗ ಶಿರಂಗಾಲದವರೆಗೆ ಮಳೆಗಾಲ ಮತ್ತು ಬೇಸಿಗೆಯಲ್ಲಿ ನೀರೊದಗಿಸುವ ನಿಯಮವಿದ್ದರೂ ಕಟ್ಟೆ ನಿರ್ಮಾಣಗೊಂಡು 50 ವರ್ಷ ಕಳೆದರೂ ಎರಡು ಬೆಳೆಗೆ ನೀರನ್ನು ಒದಗಿಸಿಲ್ಲ. ಅಲ್ಲದೆ, ನೀರು ಹರಿಯುವ ಉಪಕಾಲುವೆಗಳು ಸಮರ್ಪಕವಾಗಿಲ್ಲ ಮತ್ತು ಶೀತ ಪ್ರದೇಶವಾಗಿರುವ ಶಿರಂಗಾಲದಲ್ಲಿ ಇದುವರೆಗೂ ಇಲಾಖೆಯ ವತಿಯಿಂದ ಕಾಲುವೆ ಕಾಮಗಾರಿಗಳು ಸಮಗ್ರವಾಗಿ ನಡೆದಿಲ್ಲ. ಈ ಬಗ್ಗೆ ತಾವು ಕ್ರಮಕೈಗೊಂಡು ಆಗಬೇಕಿರುವ ನೀರಾವರಿ ಇಲಾಖೆಯ ಕಾಮಗಾರಿಗಳನ್ನು ನಡೆಸಿಕೊಡಬೇಕು ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

ಸ್ಥಳದಲ್ಲಿದ್ದ ಕಾವೇರಿ ನೀರಾವರಿ ನಿಗಮದ ಹಾರಂಗಿ ಅಚ್ಚುಕಟ್ಟು ಪ್ರದೇಶದ ಸಹಾಯಕ ಇಂಜಿನಿಯರ್ ಅವರು ಈಗಾಗಲೇ ಕಾವೇರಿ ನೀರಾವರಿ ಇಲಾಖೆಯ ವತಿಯಿಂದ ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ, ಹಾರಂಗಿ ಅಚ್ಚುಕಟ್ಟು ಪ್ರದೇಶಕ್ಕೆ ಎರಡನೇ ಬೆಳೆಗೆ ಕೊಡಗಿನ ಗಡಿಭಾಗದವರೆಗೆ ನೀರೊದಗಿಸುವ ಯೋಜನೆಯು ರಾಜ್ಯ ಸರ್ಕಾರ ಮಟ್ಟದಲ್ಲಿದ್ದು, ಅಲ್ಲಿಂದ ಸೂಚನೆ ಬಂದಲ್ಲಿ ನಾವು ಕಾರ್ಯೋನ್ಮುಖ ರಾಗುತ್ತೇವೆ ಎಂದು ತಿಳಿಸಿದರು.

ಶಿರಂಗಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸಂಬಂಧಪಟ್ಟಂತೆ ಮುಖ್ಯರಸ್ತೆ ಮತ್ತು ಉಪರಸ್ತೆಗಳ ಒತ್ತುವರಿ ಸೇರಿದಂತೆ ಅವುಗಳ ತೆರವಿಗೆ ಮತ್ತು ಶಾಲಾ ಆವರಣದ ಜಾಗವನ್ನು ಸರ್ವೆ ನಡೆಸಿ ಹದ್ದುಬಸ್ತು ಮಾಡಿ ಪಹಣಿ ಮಾಡಿಕೊಡುವ ಬಗ್ಗೆ ಗ್ರಾಮಸ್ಥರು ನೀಡಿದ ಅರ್ಜಿಗೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಪರಿಪೂರ್ಣವಾಗಿ ಕಾರ್ಯನಿರ್ವಹಿಸುವಂತೆ ಆದೇಶಿಸಿದರು.

ಕಂದಾಯ ಇಲಾಖೆಗೆ ಸಂಬಂಧಪಟ್ಟಂತಹ ಮಾಶಾಸನಗಳ ಬಗ್ಗೆ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಜಿ, ಪಹಣಿಗಳಲ್ಲಿ ತಿದ್ದುಪಡಿ ಮಾಡುವ ಅರ್ಜಿ, ಸರ್ವೆ ಇಲಾಖೆಗೆ ಸಂಬಂಧಿಸಿದ ಪೋಡಿ, ದಾರಿ ವಿವಾದ ಹದ್ದುಬಸ್ತು ಇತರೆ ಅರ್ಜಿ, ಪಹಣಿ ಕಲಂ3 ಮತ್ತು 9ಕ್ಕೆ ಸಂಬಂಧಿಸಿದ ತಿದ್ದುಪಡಿ, ಕಂದಾಯ ನಿಗದಿಗೆ ಸಂಬಂಧಿಸಿದ ಅರ್ಜಿ ಸೇರಿದಂತೆ ಇನ್ನಿತರ ಅರ್ಜಿಗಳನ್ನು ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರು ನೀಡಿದ ಸಂದರ್ಭ, ಹಂತ ಹಂತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದೆರಡು ವರ್ಷಗಳಿಂದ ಪ್ರಕೃತಿ ವಿಕೋಪದ ಪರಿಹಾರವು ಸಮರ್ಪಕವಾಗಿ ಈ ಪಂಚಾಯಿತಿ ವ್ಯಾಪ್ತಿಗೆ ದೊರಕದೆ ಇರುವ ಬಗ್ಗೆ ಗ್ರಾಮಸ್ಥರು ಲಿಖಿತವಾಗಿ ಅರ್ಜಿ ಸಲ್ಲಿಸಿ, ಈ ವಿಚಾರವಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈಗಾಗಲೇ ಜಿಲ್ಲಾ ಮಟ್ಟದಿಂದ ತಾಲೂಕು ಹಾಗೂ ಹೋಬಳಿ ಮಟ್ಟದ ಅಂಕಿಅಂಶಗಳ ಆಧಾರದ ಮೇಲೆ ಆಯಾ ಗ್ರಾಮ ಪಂಚಾಯ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆಡಳಿತ ಮಂಡಳಿ ಹಾಗೂ ಗ್ರಾಮ ಲೆಕ್ಕಿಗನ ಸ್ಥಳ ಪರಿಶೀಲನೆಯ ಆಧಾರದಡಿ ಈಗಾಗಲೇ ಎಲ್ಲಾ ಫಲಾನುಭವಿಗಳಿಗೆ ಅವರವರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಅದರಂತೆ ಪ್ರಕೃತಿ ವಿಕೋಪದ ಅಡಿಯಲ್ಲಿ ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಹಣ ಮತ್ತು ಪರಿಹಾರದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಆಹಾರ ಇಲಾಖೆಗೆ ಸಂಬಂಧ ಪಟ್ಟಂತೆ ಪಡಿತರ ಚೀಟಿಗಳು ಈಗಾಗಲೇ ವಿತರಣೆ ಆಗುತ್ತಿದ್ದರೂ ಬೆರಳಚ್ಚು ನೀಡುವ ಮತ್ತು ಇನ್ನಿತರ ಸಮಸ್ಯೆಗಳಿಂದ ಪಡಿತರ ವಸ್ತುಗಳ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಹಾಗೂ ಬೆರಳಚ್ಚು ನೀಡುವ ಸಂದರ್ಭ ಆಗುವ ತಾಂತ್ರಿಕ ದೋಷ ಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ತಿಳಿಸಿದರು.

ಆರೋಗ್ಯ ಮತ್ತು ಪಶುಪಾಲನಾ ಇಲಾಖೆಗೆ ಸಂಬಂಧಪಟ್ಟಂತೆ ಶಿರಂಗಾಲ ಗ್ರಾಮದಲ್ಲಿ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಸಿಬ್ಬಂದಿಗಳ ಕೊರತೆ ಎದುರಿಸುತ್ತಿದೆ. ಸಿಬ್ಬಂದಿಗಳನ್ನು ನೇಮಕ ಮಾಡುವ ಮೂಲಕ ಈ ಭಾಗದ ಗ್ರಾಮಸ್ಥರಿಗೆ ಆರೋಗ್ಯ ಸೇವೆ ಒದಗಿಸುವಂತೆ ಮನವಿ ಮಾಡಿದರು. ಅಲ್ಲದೆ, ಹೆಚ್ಚು ಹೈನುಗಾರಿಕೆಯಲ್ಲಿ ತೊಡಗಿರುವ ಗ್ರಾಮಸ್ಥರಿಗೆ ಪಶುಪಾಲನಾ ಇಲಾಖೆ ವತಿಯಿಂದ ಪಶುವೈದ್ಯ ಶಾಲೆಯನ್ನು ತೆರೆಯುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಈ ವ್ಯಾಪ್ತಿಯಲ್ಲಿ 14 ಕ್ಕೂ ಹೆಚ್ಚು ಕೆರೆಗಳಿದ್ದು, ಕೆರೆಗಳಲ್ಲಿ ಹೂಳು ತುಂಬಿದ್ದು, ಜೊತೆಗೆ ಒತ್ತುವರಿ ಯಾಗಿವೆ. ಅಂತರ್ಜಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆರೆಗಳ ಹೂಳೆತ್ತುವದರ ಜೊತೆಗೆ ಒತ್ತುವರಿ ಸರ್ವೆ ಕಾರ್ಯ ನಡೆಸಿ ಕೆರೆಯಲ್ಲಿ ನೀರು ಸಂಗ್ರಹಕ್ಕೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.

ಕಾವೇರಿ ಹೊಳೆಯ ದಡದಲ್ಲಿರುವ ಶಿರಂಗಾಲ ಗ್ರಾಮವು ಮಳೆಗಾಲದಲ್ಲಿ ಹೆಚ್ಚು ನೀರು ಸಂಗ್ರಹದಿಂದ ಈ ಭಾಗದಲ್ಲಿ ಹೆಚ್ಚು ಮರಳು ಸಂಗ್ರಹವಾಗುತ್ತದೆ. ಕಳೆದ 15 ವರ್ಷಗಳಿಂದಲೂ ಈ ವ್ಯಾಪ್ತಿಯಲ್ಲಿ ಮರಳು ತೆಗೆಯುವುದು ಜಿಲ್ಲಾ ಮಟ್ಟದಲ್ಲಿ ಟೆಂಡರ್ ಮೂಲಕ ನಡೆಯುತ್ತಿತ್ತು. ಇದೀಗ ಸ್ಥಗಿತಗೊಂಡಿದೆ. ನದಿಯಿಂದ ಮರಳು ತೆಗೆಯುವ ಮೂಲಕ ಗ್ರಾಮದ ಅಭಿವೃದ್ಧಿಗೆ ಅನುಕೂಲ ಮಾಡಿಕೊಡ ಬೇಕು ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಕೆಲವು ಪ್ರದೇಶವು ಊರುಗುಪ್ಪೆ ಮತ್ತು ಊರಡುವೆ ಜಾಗವಾಗಿದ್ದು, ಈ ಜಾಗದಲ್ಲಿ ಅನೇಕ ಗ್ರಾಮಸ್ಥರು, ನಿವೇಶನ ರಹಿತರು ಮನೆ ಕಟ್ಟಿಕೊಂಡಿದ್ದಾರೆ. ಅವರಿಗೆ ಹಕ್ಕುಪತ್ರ ನೀಡಲು ಅನೇಕ ಎಡರು-ತೊಡರು ಆಗುತ್ತಿರುವ ಬಗ್ಗೆ ಹಾಗೂ ಇದುವರೆಗೂ ಹಕ್ಕು ಪತ್ರ ಸಿಗದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಿದರು.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿ ಊರುಡುವೆ, ಊರುಗುಪ್ಪೆ, ಹುಲ್ಲುಗಾವಲು ಸೇರಿದಂತೆ ಈ ವಿಷಯಕ್ಕೆ ಅರಣ್ಯ ಇಲಾಖೆಯೊಂದಿಗೆ ಸಮಗ್ರವಾಗಿ ಚರ್ಚಿಸಿ ಪರಿಹಾರ ಕಂಡುಹಿಡಿಯುವಲ್ಲಿ ಕಾರ್ಯೋನ್ಮುಖ ರಾಗಿ ಸದÀ್ಯದಲ್ಲಿ ಹಕ್ಕುಪತ್ರಗಳನ್ನು ನೀಡಲು ಪ್ರಯತ್ನಿಸಲಾಗುವುದು ಎಂದರು.

ಈ ಸಂದರ್ಭ ಶಿರಂಗಾಲ ಗ್ರಾಮದ ಮಧ್ಯಭಾಗದಲ್ಲಿರುವ ಕೈಮಗ್ಗ ಕಟ್ಟಡ ಮತ್ತು ಮಹಿಳಾ ಸಮಾಜದ ಕಟ್ಟಡಗಳ ಅಭಿವೃದ್ಧಿ ಪಡಿಸುವ ಬಗ್ಗೆ ಮನವಿ ಸಲ್ಲಿಸಿದ ಮೇರೆಗೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಆಗಬೇಕಾಗಿರುವ ಕಟ್ಟಡ ಕಾಮಗಾರಿಗೆ ವ್ಯವಸ್ಥೆ ಕಲ್ಪಿಸಿಕೊಡಲು ಹಾಗೂ ಜಾಗದ ದಾಖಲಾತಿಗಳನ್ನು ಒದಗಿಸಿಕೊಡಲು ಸೂಚಿಸಿದರು.

ಅರ್ಹರಿಗೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಮಾಸಾಶನ ಪತ್ರವನ್ನು ವಿತರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ರವರೆಗೆ ಜನಸಂಪರ್ಕ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ಗ್ರಾಮಸ್ಥರ ಅಹವಾಲುಗಳನ್ನು ಹಾಗೂ ಅರ್ಜಿಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ತಿಳಿಸಿ, ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೂ ಸಹ ಸೂಚಿಸಿದರು.

ಸಭೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ, ಸಭೆ ಮುಗಿದ ನಂತರ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊತೆಹಳ್ಳಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಿಸಿ, ಶೀತಪ್ರದೇಶ ಎಂದು ಮಾಹಿತಿ ಬಂದಿದ್ದು, ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಪರಿಹಾರ ಕಂಡುಹಿಡಿಯಲು ಕಾರ್ಯೋನ್ಮುಖರಾಗಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಜವರೇಗೌಡ, ಜಿಲ್ಲಾ ಭೂ ಸರ್ವೇ ಅಧಿಕಾರಿ ಶ್ರೀನಿವಾಸ್, ತಾಲೂಕು ತಹಶೀಲ್ದಾರ್ ಗೋವಿಂದರಾಜು, ತಾಲೂಕು ಕಾರ್ಯನಿರ್ವಹಣಾಧಿಕಾರಿ ಸುನೀಲ್, ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ, ಪಶುಪಾಲನಾ ಇಲಾಖೆ, ಆಹಾರ ಇಲಾಖೆ, ಅರಣ್ಯ ಇಲಾಖೆ, ವಿದ್ಯುತ್, ಲೋಕೋಪಯೋಗಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗಿರಿಜನ ಅಭಿವೃದ್ಧಿ

ಇಲಾಖೆ, ಜಿಲ್ಲಾ ಪಂಚಾಯಿತಿ ಇಂಜಿನಿಯರ್ ವಿಭಾಗ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ, ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.

-ಕೆ.ಕೆ. ನಾಗರಾಜಶೆಟ್ಟಿ.