ವೀರಾಜಪೇಟೆ, ಫೆ.16: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡುವಿನ ಕಡೆಕೊಲ್ಲಿಯಲ್ಲಿ ಯುವಜ್ಯೋತಿ ಯುವಕ ಸಂಘದ ವತಿಯಿಂದ 9ನೇ ವರ್ಷದ ಕ್ರಿಕೆಟ್ ಪಂದ್ಯಾಟ ತಾ. 29 ಮತ್ತು ಮಾರ್ಚ್ 1ರಂದು ನಡೆಯಲಿದೆ ಎಂದು ಆಯೋಜಕ ಎ.ಜೆ.ಅನಿಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಂದ್ಯಾಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 15,000ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ 10,000 ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳು ತಾ. 28ರೊಳಗೆ ತಮ್ಮ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಎ.ಜೆ. ಅನಿಲ್ 9740938098, 9880057573 ಸಂಪರ್ಕಿಸಬಹುದು