ಮಡಿಕೇರಿ, ಫೆ. 15: ಜಿಲ್ಲಾ ಕಾಂಗ್ರೆಸ್‍ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಕಾಂಗ್ರೆಸ್ ವರಿಷ್ಠರು ನಿಗಾ ಇರಿಸಿದ್ದು, ಇದು ಹೀಗೇ ಮುಂದುವರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಟಿ.ಈ. ಸುರೇಶ್ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗರು ಒಂದೇ ವೇದಿಕೆಯಲ್ಲಿ ಒಗ್ಗಟ್ಟಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಮಡಿಕೇರಿ, ಫೆ. 15: ಜಿಲ್ಲಾ ಕಾಂಗ್ರೆಸ್‍ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಕಾಂಗ್ರೆಸ್ ವರಿಷ್ಠರು ನಿಗಾ ಇರಿಸಿದ್ದು, ಇದು ಹೀಗೇ ಮುಂದುವರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಟಿ.ಈ. ಸುರೇಶ್ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗರು ಒಂದೇ ವೇದಿಕೆಯಲ್ಲಿ ಒಗ್ಗಟ್ಟಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಗಣಿಸಿದೆ ಎಂದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಎಸ್. ಅನಂತ ಕುಮಾರ್ ಮಾತನಾಡಿ, ಸದ್ಯದಲ್ಲಿಯೇ ವಲಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಸುವುದಾಗಿ ಹೇಳಿದರು.

ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ಅಜ್ಜಳ್ಳಿ ರವಿ ಮಾತನಾಡಿ, ದೇಶದಲ್ಲಿ ಕೇಂದ್ರ ಸರ್ಕಾರದ ಅರ್ಥಹೀನ ಆರ್ಥಿಕ ವ್ಯವಸ್ಥೆಯಿಂದ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದ್ದು, ಕಾರ್ಮಿಕ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಬಿಜೆಪಿ ನೀತಿಯಿಂದ ಬೇಸತ್ತಿರುವ ಕಾರ್ಮಿಕರು ಇಂದಿಗೂ ಕಾಂಗ್ರೆಸ್‍ನೊಂದಿಗೆ ಇದ್ದಾರೆ ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಮಾತನಾಡಿ, ಸಿದ್ದಾಪುರದಲ್ಲಿ ನಡೆಯುತ್ತಿರುವ ಮಳೆಹಾನಿ ಸಂತ್ರಸ್ತರ ಅಹೋ ರಾತ್ರಿ ಧರಣಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು. ಸಂತ್ರಸ್ತರಿಗೆ ಶೀಘ್ರ ಮನೆಗಳನ್ನು ನಿರ್ಮಿಸಿಕೊಡಬೇಕು ಮತ್ತು ಬಾಡಿಗೆ ಹಣವನ್ನು ಪಾವತಿಸಬೇಕೆಂದು ಒತ್ತಾಯಿಸಿದರು.

ಕೆಪಿಸಿಸಿ ಕಾರ್ಮಿಕ ಘಟಕ ಅಧ್ಯಕ್ಷ ಪಿ.ಎಸ್. ಅನಂತ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಸೈಯ್ಯದ್ ಬಾವ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಸೋಮವಾರಪೇಟೆ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹಿದ್ ಖಾನ್ ಉಪಸ್ಥಿತರಿದ್ದರು.