ಮಡಿಕೇರಿ, ಫೆ. 15: ಇದೇ ಮಾರ್ಚ್ 4 ರಿಂದ ರಾಜ್ಯಾದ್ಯಂತ ಪಿ.ಯು. ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಯಾವುದೇ ಬಗೆಯ ಗೊಂದಲಗಳಿಗೆ ಎಡೆಮಾಡಿಕೊಡದಂತೆ ಎಚ್ಚರಿಕೆಯಿಂದ ಪರೀಕ್ಷೆ ನಡೆಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಬೆಂಗಳೂರಿನ ವಿಕಾಸಸೌಧದಿಂದ ವೀಡಿಯೋ ಕಾನ್ಫರೆನ್ಸ್ ಮುಖಾಂತರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಏಕಕಾಲದಲ್ಲಿ ಸಭೆ ನಡೆಸಿ ಅವರು ಮಾತನಾಡಿದರು. ಪಿ.ಯು. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಈಗಾಗಲೇ ಅನೇಕ ಅಗತ್ಯ ಕ್ರಮ ಕೈಗೊಂಡಿದ್ದು, ಮಾರ್ಚ್ 4 ರಿಂದ ಪರೀಕ್ಷೆಗಳು ನಡೆಯಲಿದೆ. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಪರೀಕ್ಷೆ ನಡೆಸುವಂತಾಗಬೇಕು ಎಂದು ಸಚಿವರು ಸೂಚಿಸಿದರು.
ಎಲ್ಲಾ ಜಿಲ್ಲೆಗಳಲ್ಲಿಯೂ ಸಹ ಅಪರ ಜಿಲ್ಲಾಧಿಕಾರಿಗಳು, ಡಿಡಿಪಿಯು ಮತ್ತು ಖಜಾನಾಧಿಕಾರಿಗಳ ತಂಡ ಸಿದ್ಧವಿರಬೇಕು. ಅಪರ ಜಿಲ್ಲಾಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿರುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದನ್ನು ತಡೆಗಟ್ಟಲು ಸಾಕಷ್ಟು ಗಮನಹರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದರು. 2017 ರಿಂದ ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಅನ್ನು ಸಹ ಜಾರಿಗೊಳಿಸಿದ್ದು, ಪಾರದರ್ಶಕ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಮಡಿಕೇರಿ, ಫೆ. 15: ಇದೇ ಮಾರ್ಚ್ 4 ರಿಂದ ರಾಜ್ಯಾದ್ಯಂತ ಪಿ.ಯು. ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಯಾವುದೇ ಬಗೆಯ ಗೊಂದಲಗಳಿಗೆ ಎಡೆಮಾಡಿಕೊಡದಂತೆ ಎಚ್ಚರಿಕೆಯಿಂದ ಪರೀಕ್ಷೆ ನಡೆಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಬೆಂಗಳೂರಿನ ವಿಕಾಸಸೌಧದಿಂದ ವೀಡಿಯೋ ಕಾನ್ಫರೆನ್ಸ್ ಮುಖಾಂತರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಏಕಕಾಲದಲ್ಲಿ ಸಭೆ ನಡೆಸಿ ಅವರು ಮಾತನಾಡಿದರು. ಪಿ.ಯು. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಈಗಾಗಲೇ ಅನೇಕ ಅಗತ್ಯ ಕ್ರಮ ಕೈಗೊಂಡಿದ್ದು, ಮಾರ್ಚ್ 4 ರಿಂದ ಪರೀಕ್ಷೆಗಳು ನಡೆಯಲಿದೆ. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಪರೀಕ್ಷೆ ನಡೆಸುವಂತಾಗಬೇಕು ಎಂದು ಸಚಿವರು ಸೂಚಿಸಿದರು.
ಎಲ್ಲಾ ಜಿಲ್ಲೆಗಳಲ್ಲಿಯೂ ಸಹ ಅಪರ ಜಿಲ್ಲಾಧಿಕಾರಿಗಳು, ಡಿಡಿಪಿಯು ಮತ್ತು ಖಜಾನಾಧಿಕಾರಿಗಳ ತಂಡ ಸಿದ್ಧವಿರಬೇಕು. ಅಪರ ಜಿಲ್ಲಾಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿರುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದನ್ನು ತಡೆಗಟ್ಟಲು ಸಾಕಷ್ಟು ಗಮನಹರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದರು. 2017 ರಿಂದ ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಅನ್ನು ಸಹ ಜಾರಿಗೊಳಿಸಿದ್ದು, ಪಾರದರ್ಶಕ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.ಎಲ್ಲಾ ಜಿಲ್ಲಾ ಖಜಾನೆಗಳಲ್ಲಿಯೂ ಸಹ ಸೂಕ್ತ ಭದ್ರತೆಯನ್ನು ನೀಡಬೇಕು. ಈ ಮೊದಲು ಬೆಂಗಳೂರಿನಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳ ಖಜಾನೆಯ ಸಿಸಿಟಿವಿ ಮಾನಿಟರ್ ಮಾಡಲಾಗುತ್ತಿತ್ತು. ಈ ಬಾರಿ ಜಿಲ್ಲಾಧಿಕಾರಿಗಳ ಕಚೇರಿಯಿಂದಲೇ ಮಾನಿಟರಿಂಗ್ ಕಾರ್ಯವಾಗಬೇಕು ಎಂದರು.
ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್ ಮಳಿಗೆಗಳನ್ನು ಕಡ್ಡಾಯವಾಗಿ ಮುಚ್ಚಿಸಬೇಕು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಗಮನಹರಿಸುವಂತೆ ಸೂಚಿಸಿದರು. ಸಿಸಿಟಿವಿಯ ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಬೇಕು. ಜಿಲ್ಲೆಯ ಸೈಬರ್, ಜೆರಾಕ್ಸ್ ಅಂಗಡಿಗಳ ಮೇಲೆ ಹೆಚ್ಚಿನ ಗಮನವಿಡಬೇಕು. ಅನಗತ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳಬೇಕು ಎಂದರು.
ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಚೀಫ್ ಎಕ್ಷಾಮಿನೇಷನ್ ಅಧಿಕಾರಿಯವರನ್ನು ಹೊರತುಪಡಿಸಿ ಮತ್ತ್ಯಾರಿಗೂ ಸಹ ಮೊಬೈಲ್ ಬಳಕೆಗೆ ಅವಕಾಶವಿಲ್ಲ ಎಂದರು.
ಪರೀಕ್ಷಾ ಕೇಂದ್ರದಿಂದ ಅರ್ಧಗಂಟೆ ಮುಂಚಿತವಾಗಿ ವಿದ್ಯಾರ್ಥಿಯು ಹೊರ ಹೋದರೆ ಅವರ ಉತ್ತರ ಪತ್ರಿಕೆಯ ಜೊತೆಗೆ ಪ್ರಶ್ನೆ ಪತ್ರಿಕೆಯನ್ನೂ ಸಹ ತಪ್ಪದೆ ಕೊಠಡಿ ಮೇಲ್ವಿಚಾರಕರು ವಶಪಡಿಸಿಕೊಳ್ಳಬೇಕು. ಇಲ್ಲವಾದರೆ ಆ ಪ್ರಶ್ನೆ ಪತ್ರಿಕೆಯು ದುರುಪಯೋಗವಾಗುವ ಸಾಧ್ಯತೆಯಿರುತ್ತದೆ ಎಂದು ಸಚಿವರು ಎಚ್ಚರಿಸಿದರು.
ಮಕ್ಕಳಿಗೆ ಪರೀಕ್ಷಾ ಸಂದರ್ಭದಲ್ಲಿ ಮೂರು ರೀತಿಯ ಆತಂಕಗಳಿರುತ್ತವೆ. ಪ್ರಶ್ನೆ ಪತ್ರಿಕೆ ಸೋರಿಕೆ, ಸಾಮೂಹಿಕ ನಕಲು ಮಾಡಿಸುವುದು ಮತ್ತು ಮೌಲ್ಯಮಾಪನ ಸಂದರ್ಭ ಅಂಕಗಳು ಕಡಿತವಾಗುತ್ತದೆ ಎಂದು. ಆದ್ದರಿಂದ ಚುನಾವಣಾ ಸಂದರ್ಭ ಹೇಗೆ ಕಾರ್ಯನಿರ್ವಹಿಸುತ್ತೀರೋ, ಹಾಗೆಯೇ ಪಿ.ಯು. ಪರೀಕ್ಷೆ ಸಂದರ್ಭದಲ್ಲಿಯೂ ಸಹ ಕಾರ್ಯ ನಿರ್ವಹಿಸುವಂತೆ ತಿಳಿಸಿದರು. ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕನಗವಲ್ಲಿ ಮಾತನಾಡಿ, ಈಗಾಗಲೇ ತಿಳಿಸಿರುವಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು, ಖಜಾನೆ ಅಧಿಕಾರಿ ಮತ್ತು ಡಿ.ಡಿ.ಪಿ.ಯು ಅವರು ಪರೀಕ್ಷಾ ಮಾಸದಲ್ಲಿ ಜಿಲ್ಲಾ ಕೇಂದ್ರದಲ್ಲಿಯೇ ಉಳಿದುಕೊಳ್ಳುವಂತೆ ಸೂಚಿಸಿದರು.
ವೀಡಿಯೋ ಕಾನ್ಫರೆನ್ಸ್ನಲ್ಲಿ ಜಿಲ್ಲಾಧಿಕಾರಿಗಳಾದ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಮನ್ ಡಿ. ಪನ್ನೇಕರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಭವಾನಿ, ಜಿಲ್ಲಾ ಖಜನಾಧಿಕಾರಿ ಇತರರು ಇದ್ದರು.