ಮಡಿಕೇರಿ, ಫೆ.15 : ಜನಸಾಮಾನ್ಯರ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಯಾಗಬೇಕಾಗಿದ್ದು, ಮುಂಬರುವ ಮಡಿಕೇರಿ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದÀರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಮುಂಬರುವ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಬ್ಲಾಕ್ ಕಾಂಗ್ರೆಸ್‍ನ ಗುರಿಯಾಗಿದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಪ್ರತಿ ಬೂತ್ ಮಟ್ಟದಲ್ಲಿ ಸಭೆ ನಡೆಸುವ ಮೂಲಕ ಪಕ್ಷವನ್ನು ಬಲಗೊಳಿಸುವಂತೆ ಸಲಹೆ ನೀಡಿದರು.
ಜಿ.ಪಂ ಸದಸೆÀ್ಯ ಕೆ.ಪಿ.ಚಂದ್ರಕಲಾ ಮಾತನಾಡಿ, ಬೂತ್ ಮಟ್ಟ ಮತ್ತು ವಲಯ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕÀ ಮುಂದಿನ ಗ್ರಾ.ಪಂ ಚುನಾವಣೆಗೆ ಸಜ್ಜಾಗುವಂತೆ ತಿಳಿಸಿದರು.
ಪಕ್ಷದ ಹಿರಿಯ ಮುಖಂಡ ಹೆಚ್.ಎಸ್.ಚಂದ್ರಮೌಳಿ ಮಾತನಾಡಿ, ಪಕ್ಷದ ಬಲವರ್ಧನೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಖಜಾಂಚಿ ಹೆಚ್.ಎಂ.ನಂದಕುಮಾರ್ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಎಸ್.ಸಿ., ಎಸ್.ಟಿ ಮತ್ತು ಓಬಿಸಿ ವರ್ಗಗಳ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ತೀರ್ಪಿಗೆ ಕೇಂದ್ರ ಸರ್ಕಾರ ಕಾರಣವಾಗಿದೆ ಎಂದು ಆರೋಪಿಸಿದ ಸಭೆ ಖಂಡನಾ ನಿರ್ಣಯ ಕೈಗೊಂಡಿತು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಡಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಸೋನಿಯ ಬ್ರಿಗೇಡ್‍ನ ಜಿಲ್ಲಾಧ್ಯಕ್ಷ ಜಾನ್ಸನ್, ವೃತ್ತಿಪರ ಘಟಕದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ಡಿಸಿಸಿ ಪ್ರಮುಖರಾದ ಟಿ.ಪಿ.ರಾಜೇಂದ್ರ, ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸದಾಮುದ್ದಪ್ಪ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಾಹುಲ್ ಮಾರ್ಷಲ್, ಎಸ್‍ಸಿ ಘಟಕದ ಅಧ್ಯಕ್ಷ ಮುದ್ದುರಾಜ್, ನಗರ ಹಿಂದುಳಿದ ವರ್ಗದ ಅಧ್ಯಕ್ಷ ಜಿ.ಸಿ.ಜಗದೀಶ್, ರಾಹುಲ್ ಬ್ರಿಗೇಡ್‍ನ ಅಧ್ಯಕ್ಷ ಯತೀಶ್ ಕುಮಾರ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು. ತೆನ್ನಿರ ಮೈನಾ ಸ್ವಾಗತಿಸಿ, ಕೆ.ಎಂ.ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು.