ಸಿದ್ದಾಪುರ, ಫೆ. 15: ಸಿದ್ದಾಪುರದ ಸಿ.ಪಿ.ಐ.ಎಂ. ಪಕ್ಷದ ವತಿಯಿಂದ ಪೌರತ್ವ ಕಾಯ್ದೆ ತಿದ್ದುಪಡಿ ಮತ್ತು ಎನ್.ಪಿ.ಎ. ಬಗ್ಗೆ ಸಭೆ ನಡೆಯಿತು. ಭಾರತ್ ಕಮ್ಯೂನಿಸ್ಟ್ ಪಕ್ಷ ಮಾಕ್ಸ್‍ವಾದಿಯ ಸಿದ್ದಾಪುರ ಗ್ರಾಮ ಸಮಿತಿಯ ವತಿಯಿಂದ ನಡೆದ ಸಭೆಯು ಸಿದ್ದಾಪುರ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ಪಕ್ಷದ ಗ್ರಾಮ ಸಮಿತಿಯ ಕಾರ್ಯದರ್ಶಿ ಎನ್.ಡಿ. ಕುಟ್ಟಪ್ಪನ್ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಕಣ್ಣೂರು ಜಿಲ್ಲೆಯ ಸಿ.ಪಿ.ಐ.ಎಂ. ಪಕ್ಷದ ಕಾರ್ಯದರ್ಶಿ ಎಂ.ವಿ. ಜಯರಾಜನ್ ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ಸಿ.ಎ.ಎ. ಹಾಗೂ ಎನ್.ಆರ್.ಸಿ. ಕಾಯ್ದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವು ಜಾತಿವಾದಿ ಆಡಳಿತ ಗ್ರಾ.ಪಂ. ಅಧ್ಯಕ್ಷ ಮಣಿ, ಮೂಸಾ, ಸಿ.ಐ.ಟಿ.ಯು. ಮುಖಂಡ ಮಾದೇವ್ ಸೇರಿದಂತೆ ಇನ್ನಿತರರು ಹಾಜರಿದ್ದರು.ನಡೆಸುತ್ತಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪೌರತ್ವ ಕಾಯ್ದೆಯ ಬಗ್ಗೆ ವಿರೋಧ ವ್ಯಕ್ತಪಡಿಸುವವರನ್ನು ದೇಶದ್ರೋಹಿಗಳೆಂದು ಟೀಕಿಸುತ್ತಿರುವುದು ಖಂಡನೀಯ ಎಂದರು.

ಜಿಲ್ಲಾ ಪ್ರಗತಿ ಪರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ ಬಿ.ಜೆ.ಪಿ. ಪಕ್ಷವು ಕೇಂದ್ರದಲ್ಲಿ ಜಾತಿಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ನಂತರ ಹಿಂದೂ ಧರ್ಮದ ಹೆಸರಿನಲ್ಲಿ ಮತ್ತೊಂದು ಧರ್ಮದ ಮೇಲೆ ಅಪಪ್ರಚಾರ ಮಾಡಿ ದ್ವೇಷ ಸಾಧಿಸುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಪಕ್ಷವು ಮತ ಬ್ಯಾಂಕಿಗಾಗಿ ಪೌರತ್ವವನ್ನು ಜಾರಿಗೆ ತರುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ದೂರಿದರು.

ಸಭೆಯಲ್ಲಿ ಸಿ.ಪಿ.ಐ.ಎಂ. ಪಕ್ಷದ ಕಣ್ಣೂರು ಜಿಲ್ಲಾ ಮುಖಂಡ ಶ್ರೀಧರನ್ ಹಾಗೂ ಪಕ್ಷದ ಜಿಲ್ಲಾ ಮುಖಂಡರಾದ ಡಾ. ಐ.ಆರ್. ದುರ್ಗಾ ಪ್ರಸಾದ್ ಇತರರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿ.ಪಿ.ಐ.ಎಂ. ಕಾರ್ಯದರ್ಶಿ ಎಚ್.ಬಿ. ರಮೇಶ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಡಾ. ಪಿ.ಸಿ. ಹಸೈನಾರ್ ಹಾಜಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್, ತಾಲೂಕು ಪಂಚಾಯಿತಿ ಸದಸ್ಯೆ ಸುಹದಾ,