ಶನಿವಾರಸಂತೆ, ಫೆ. 16: ಸಮೀಪದ ಆಲೂರು ಸಿದ್ದಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎಸ್. ಸಂಜನಾ ಬೆಂಗಳೂರಿನ ಭಾರತ ಸಂಸ್ಕøತಿ ಪ್ರತಿಷ್ಠಾನದ ವತಿಯಿಂದ ನಡೆದ ಭಾರತ ಸಂಸ್ಕøತಿ ಪರಿಚಯ ಪರೀಕ್ಷೆಯಲ್ಲಿ ಭಾಗವಹಿಸಿ ಕೊಡಗು ಜಿಲ್ಲೆಗೆ ದ್ವಿತೀಯ ಸ್ಥಾನಗಳಿಸಿದ್ದು, ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಶಾಲೆಯ ಕನ್ನಡ ಭಾಷಾ ಶಿಕ್ಷಕಿ ಟಿ.ಎಲ್. ಲೋಲಾಕ್ಷಿ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದಾರೆ. ಸಂಜನಾ ಕೊಡ್ಲಿಪೇಟೆಯ ಶಿವರಾಜ್-ಗಿರಿಜಾ ದಂಪತಿಯ ಪುತ್ರಿ.